ಬಂಟ್ವಾಳ: ಅಧಿಕಾರಿಗಳು, ಸಿಬ್ಬಂದಿ ಗಳು ನಿರಂತರವಾಗಿ ಸಂಸ್ಥೆಯ ಜೊತೆಯಲ್ಲಿ ಉತ್ತಮ ರೀತಿಯಲ್ಲಿ ಸೇವೆ ಸಲ್ಲಿಸಿದ ಫಲವಾಗಿ ಇಂದು ಜಿಲ್ಲೆಯ ಎಲ್ಲಾ ಸಹಕಾರ ಬ್ಯಾಂಕ್ ಗಳು ಜನಸಾಮಾನ್ಯರ ಕಷ್ಟಕಾರ್ಪಣ್ಯಗಳಿಗೆ ಸ್ಪಂದಿಸುತ್ತಿದೆ ಎಂದು ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘದ  ಆಧ್ಯಕ್ಷ ಜಿ.ಆನಂದ ಅವರು ಹೇಳಿದರು.
1
ಅವರು ಬಂಟ್ವಾಳ ವ್ಯವಸಾಯ ಸೇವಾ ಸಂಘದಲ್ಲಿ ಸುಮಾರು 39 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ರತ್ನಾಕರ ಅವರ ಬೀಳ್ಕೊಡುಗೆ ಕಾರ್ಯಕ್ರಮದ
ಆದ್ಯಕ್ಷತೆ ವಹಿಸಿ ಮಾತನಾಡಿದರು.ಸಂಸ್ಥೆಯ ಅಭಿವೃದ್ಧಿ ಸಿಬ್ಬಂದಿಗಳಿಂದ ಮಾತ್ರ ಸಾಧ್ಯ ಎಂದು ಅವರು ಹೇಳಿದರು.
ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ಮಹಾಬಲ ಶೆಟ್ಟಿ, ನಿರ್ದೇಶಕರುಗಳಾದ ಕರುಣೇಂದ್ರ ಪೂಜಾರಿ, ಶೇಖರ್, ವಿದ್ಯಾವತಿ ಪ್ರಮೋದ್ ಕುಮಾರ್, ಬಸ್ತಿ ಸದಾಶಿವ ಶೆಣ್ಯೆ, ಪ್ರಕಾಶ್ ಕೆ, ಭವಾನಿಶಂಕರ್ ರಾವ್ , ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರತಿನಿಧಿ ಕೇಶವ ಕಿಣಿ, ಬಂಟ್ವಾಳ ಶಾಖಾ ಮುಖ್ಯಕಾರ್ಯನಿರ್ವಣಾಧಿಕಾರಿ ಜಯಪ್ರಕಾಶ್ ಕಾಮತ್  ಉಪಸ್ಥಿತರಿದ್ದರು.
ನಾವೂರು ಶಾಖಾ ವ್ಯವಸ್ಥಾಪಕರು ಪುಷ್ಪಾಲತಾ ಸ್ವಾಗತಿಸಿ, ಉಪಾಧ್ಯಕ್ಷ ಮಹಾಬಲ ಶೆಟ್ಟಿ ವಂದಿಸಿದರು.
ಸಿಬ್ಬಂದಿ ಅನಿತಾ ಕಾರ್ಯಕ್ರಮ ನಿರೂಪಿಸಿದರು.

By Suddi9

Leave a Reply

Your email address will not be published. Required fields are marked *