ಹೊಸದಿಲ್ಲಿ: ಮುಖ್ಯಮಂತ್ರಿ ಜಯಲಲಿತಾ ಆರೋಪ ಸಾಬೀತಾಗುತ್ತಿದ್ದಂತೆ ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ಅವರು `ಜೈಲ್ ಫಾರ್ ಜಯಲಲಿತಾ’ ಎಂದು ಟ್ವೀಟ್ ಮಾಡಿದ್ದಾರೆ.
ಸ್ವಾಮಿ ಅವರ ಮನೆ ಮುಂಭಾಗದಲ್ಲಿ ಜಯಲಲಿತಾ ಅವರ ಬೆಂಬಲಿಗರು ನಡೆಸುತ್ತಿರುವ ಪ್ರತಿಭಟನೆ ತಾರಕಕ್ಕೇರಿದೆ. ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದ ನಂತರ ಸ್ವಾಮಿ ತಮ್ಮ ಟ್ವಿಟ್ಟರ್ನಲ್ಲಿ ಸಂದೇಶ ದಾಖಲಿಸಿದ್ದಾರೆ. ವ್ಯಕ್ತಿಗಳು ಯಾವ ಹುದ್ದೆಯಲ್ಲಿದ್ದರೂ ನ್ಯಾಯಾಲಯದ ಆದೇಶಕ್ಕೆ ತಲೆಬಾಗಲೇಬೇಕು. ಅದರಂತೆ ಸಿಎಂ ಜಯಲಲಿತಾ ಜೈಲು ಸೇರಿದ್ದಾರೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.ಈ ನಡುವೆ ಸ್ವಾಮಿ ಅವರ ಮನೆ ಮುಂಭಾಗದಲ್ಲಿ ಜಯಲಲಿತಾ ಅಭಿಮಾನಿಗಳು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಚೆನ್ನೈ, ತಮಿಳುನಾಡಿನ ವಿವಿಧ ಕಡೆಗಳಲ್ಲಿ ಕೆಲವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೂ ಮುಂದಾಗಿದ್ದಾರೆ. ಅವರ ಪ್ರತಿಕೃತಿ ಗೆ ಬೆಂಕಿಕೊಟ್ಟು, ಚಪ್ಪಲಿ ಏಟು ನೀಡುತ್ತಿದ್ದಾರೆ.


