ಬಂಟ್ವಾಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಇವರ ಸಂಯೋಜನೆಯಲ್ಲಿ ಪುರಸಭೆ , ಲಯನ್ಸ್ ಕ್ಲಬ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬಂಟ್ವಾಳ ಇವರ ಜಂಟಿ ಆಶ್ರಯದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಸ್ಕೌಟ್ಸ್-ಗೈಡ್ಸ್,ಬುಲ್ ಬುಲ್ಸ್, ರೋವರ್ಸ್ ರೇಂಜರ್ಸ್ ಮತ್ತ ಬಿ.ಮೂಡ ಪ.ಪೂ.ಕಾಲೇಜಿನ ಎನ್.ಎಸ್.ಎಸ್. ವಿದ್ಯಾರ್ಥಿಗಳ ಸದ್ಬಾವನ ಜಾಥಾ ಮತ್ತು ಸ್ವಚ್ಚತಾ ಆಂದೋಲನ ಕಾರ್ಯಕ್ರಮ ನಡೆಯಲಿದೆ. ಪೊಳಲಿ ದ್ವಾರದ ಬಳಿಯಿಂದ ಹೊರಡುವ ಜಾಥವನ್ನು ವೃತ್ತ ನಿರೀಕ್ಷಕ ಕೆ,ಯು.ಬೆಳ್ಳಿಯಪ್ಪ ಉದ್ಘಾಟಿಸುವರು, ಬಳಿಕ ಲಯನ್ಸ್ ಸೇವಾ ಮಂದಿರದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರದಲ್ಲಿ ಹೆಚ್ಚಿನ ಸಾರ್ವಜನಿಕರು ಭಾಗವಹಿಸುವಂತೆ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
