ಬಂಟ್ವಾಳ: ಸಾಲ ವಸೂಲಾತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ ಪಡೆಯವುದರ ಜತೆಗೆ ಉತ್ತಮ ವ್ಯವಹಾರ ನಡೆಸಿದ ಬಂಟ್ವಾಳ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕನ ಉತ್ತಮ ಸಾಧನೆ ಗುರುತಿಸಿ, ಬ್ಯಾಂಕಿನ ಅಧ್ಯಕ್ಷ ಸುದರ್ಶನ್ ಜೈನ್ ಹಾಗೂ ವ್ಯವಸ್ಥಾಪಕ ಶೇಖರ ಎಂ. ಅವರನ್ನು ಅಭಿನಂದಿಸಲಾಯಿತು.
ಬೆಂಗಳೂರಿನ ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆದ ಬ್ಯಾಂಕ್ನ ವಾರ್ಷಿಕ ಮಹಾಸಭೆಯಲ್ಲಿ ೨೦೧೮-೧೯ ನೇ ಸಾಲಿನಲ್ಲಿ ರಾಜ್ಯಮಟ್ಟದಲ್ಲಿ ಉತ್ತಮ ಸಾಧನೆಗೈದ ಹಿನ್ನಲೆಯಲ್ಲಿ ಬಂಟ್ವಾಳ ಭೂ ಬ್ಯಾಂಕನ್ನು ಗುರುತಿಸಿ ಅಭಿನಂದಿಸಲಾಗಿದೆ. ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ನ ಅಧ್ಯಕ್ಷ ಕೆ.ಷಡಕ್ಷರಿ, ವ್ಯವಸ್ಥಾಪಕ ನಿರ್ದೇಶಕ ಎ.ಸಿ.ದಿವಾಕರ್ ಉಪಸ್ಥಿತರಿದ್ದರು.

