ಬಿ ಸಿ ರೋಡು :ನವರಾತ್ರಿ ಉತ್ಸವದ ಅಂಗವಾಗಿ ಮಿನಿವಿಧಾನ ಸೌಧದಲ್ಲಿ ಇಂದು ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್ ಆರ್ ಇವರ ನೇತೃತ್ವದಲ್ಲಿ ವಿಜೃಂಭಣೆಯಿಂದ ಆಯುಧ ಪೂಜೆ ನಡೆಯಿತು. ಪ್ರಧಾನ ಅರ್ಚಕ ಪುರೋಹಿತ್ ರಾಘವೇಂದ್ರ ಮಯ್ಯರಬೈಲು ಇವರಿಂದ ಪೂಜಾ ವಿಧಿ ವಿಧಾನ ಕಾರ್ಯಕ್ರಮ ನಡೆಯಿತು.

ಈ ಪೂಜಾ ಕಾರ್ಯಕ್ರಮದಲ್ಲಿ ಉಪತಹಶೀಲ್ದಾರ್ ರಾಜೇಶ್ ನಾಯ್ಕ್ .ವಿಟ್ಲ ನಾಡಕಚೇರಿ ಉಪತಹಶೀಲ್ದಾರ್ ರವಿಶಂಕರ್ ಸಿ ಎಮ್. ಪ್ರಭಾರ ಉಪತಹಶೀಲ್ದಾರ್ ಸೀತಾರಾಮ. ಗ್ರೆಟ್ಟಾ ಮಸ್ಕರೇಂಞಸ್. ಪ್ರಥಮ ದರ್ಜೆ ಸಹಾಯಕ ಪ್ರಸನ್ನ ಕುಮಾರ್ ಪಕ್ಕಳ ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ. ವಿಟ್ಲ ಹೋಬಳಿ ಕಂದಾಯ ನಿರೀಕ್ಷಕ ದಿವಾಕರ ಮುಗುಳಿಯ. ಬಂಟ್ವಾಳ ಹೋಬಳಿ ಕಂದಾಯ ನಿರೀಕ್ಷಕ ನವೀನ್ ಬೆಂಜನ ಪದವು.ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್ ತಾಲೂಕು ಕಚೇರಿ ಸಿಬ್ಬಂದಿಗಳು ಗ್ರಾಮ ಲೆಕ್ಕಾಧಿಕಾರಿಗಳು ಗ್ರಾಮ ಸಹಾಯಕರು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದೇವರ ಪ್ರಸಾದ ಸ್ವೀಕರಿಸಿದರು.
ಕೃಪೆ: ಎಸ್ ಆರ್ ಬಿಸಿರೋಡ್

