ಬಂಟ್ವಾಳ,  ಪಿಎಫ್‌ಐ ಬಂಟ್ವಾಳ ತಾಲೂಕು ಸಮಿತಿ ವತಿಯಿಂದ ‘ಜನಾರೋಗ್ಯವೇ ರಾಷ್ಟ್ರಶಕ್ತಿ’ ರಾಷ್ಟೀಯ ಆರೋಗ್ಯ ಅಭಿಯಾನದ ಭಾಗವಾಗಿ ಮ್ಯಾರಥಾನ್ ರ‍್ಯಾಲಿ ಹಾಗೂ ಯೋಗ ಪ್ರಾತ್ಯಕ್ಷಿಕೆಯು ಕೈಕಂಬದಲ್ಲಿ ರವಿವಾರ ನಡೆಯಿತು.ಪಿಎಫ್‌ಐ ಬಂಟ್ವಾಳ ತಾಲೂಕು ಅಧ್ಯಕ್ಷ ಇಜಾಝ್ ಅಹ್ಮದ್ ಧ್ವಜ ಹಸ್ತಾಂತರ ಮಾಡುವ ಮೂಲಕ ಮ್ಯಾರಥಾನ್ ರ‍್ಯಾಲಿಗೆ ಚಾಲನೆ ನೀಡಿದರು. ಬಿ.ಸಿ.ರೋಡಿನ ನಾರಾಯಣ ವೃತ್ತದಿಂದ ಮ್ಯಾರಥಾನ್ ರ‍್ಯಾಲಿ ಪ್ರಾರಂಭವಾಗಿ ಕೈಕಂಬ ಜಂಕ್ಷನ್‌ನಲ್ಲಿ ಕೊನೆಗೊಂಡಿತು. ನಂತರ ಪಿಎಫ್‌ಐ ಬಂಟ್ವಾಳ ತಂಡದಿಂದ ಆತ್ಮ ರಕ್ಷಣಾ ಕಲೆ ಹಾಗೂ ಯೋಗ ಪ್ರಾತ್ಯಕ್ಷಿಕೆ ನಡೆಯಿತು.
13 btl PFI (5)
ಪಿಎಫ್‌ಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಹನೀಫ್ ಕಾಟಿಪಳ್ಳ, ಬಂಟ್ವಾಳ ತಾಲೂಕು ಅಧ್ಯಕ್ಷ ಇಜಾಝ್ ಅಹ್ಮದ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು.
ವೇದಿಕೆಯಲ್ಲಿ ಎಸ್‌ಡಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಹುಲ್ ಎಸ್.ಎಚ್, ಪಿಎಫ್‌ಐ ತಾಲೂಕು ಪ್ರಧಾನ ಕಾರ್ಯದರ್ಶಿ ಸಲೀಂ ಫರಂಗಿಪೇಟೆ, ಎಸ್‌ಡಿಪಿಐ ಬಂಟ್ವಾಳ ಪುರಸಭಾ ಸಮಿತಿ ಅಧ್ಯಕ್ಷ ಮುನೀಶ್ ಅಲಿ, ಪಿಎಫ್‌ಐ ಬಿ.ಸಿ.ರೋಡ್ ವಲಯ ಅಧ್ಯಕ್ಷ ರಹಿಮಾನ್ ಗೂಡಿನಬಳಿ ಉಪಸ್ಥಿತರಿದ್ದರು.
ಶಬೀರ್ ರಹಿಮಾನ್ ಸ್ವಾಗತಿಸಿದರು, ಮೊಯ್ದಿನ್ ಖಾದರ್ ಕಾರ್ಯಕ್ರಮ ವಂದಿಸಿದರು.

By Suddi9

Leave a Reply

Your email address will not be published. Required fields are marked *