ಬಂಟ್ವಾಳ : ತೋಟಗಾರಿಕೆ ಇಲಾಖೆ ಬಂಟ್ವಾಳ, ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಬಂಟ್ವಾಳ ಮತ್ತು ದ ಕ ಜಿಲ್ಲಾ ದಲಿತ್ ಸೇವಾ ಸಮಿತಿ ಇದರ ಸಂಯುಕ್ತ ಆಶ್ರಯದಲ್ಲಿ ವಿಟ್ಲ ಲ್ಯಾಂಪ್ ಸೊಸೈಟಿಯ ಸಭಾ ಭವನದಲ್ಲಿ ಪರಿಶಿಷ್ಟ ಜಾತಿ ರೈತರಿಗೆ ಕೃಷಿ ಬಗ್ಗೆ ಮಾಹಿತಿ ಶಿಬಿರ, ಕೃಷಿ ಬೀಜ, ಜೇನು ಪೆಟ್ಟಿಗೆ ಮತ್ತು ಮಲ್ಲಿಗೆ ಗಿಡ ವಿತರಣ ಕಾರ್ಯಕ್ರಮ ನಡಿಯಿತು.

ಈ ಕಾರ್ಯಕ್ರಮವನ್ನು ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ ಮಲ್ಲಿಗೆ ಗಿಡ ವಿತರಿಸುವ ಮೂಕಳ ಉದ್ಘಾಟಿಸಿದರು. ದ ಕ ಜಿಲ್ಲಾ ದಲಿತ್ ಸೇವಾ ಸಮಿತಿ ಅಧ್ಯಕ್ಷ ಬಿ ಕೆ ಸೇಸಪ್ಪ ಬೆದ್ರಕಾಡಿ ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ತಾಲೂಕು ಪಂಚಾಯತ್ ಉಪಾಧ್ಯಕ್ಷ ಮಹಮ್ಮದ್ ಆಲಿ ಉಪಸ್ಥಿತರಿದ್ದರು. ಕೃಷಿ ಅಧಿಕಾರಿ ಪ್ರದೀಪ್ ಡಿ ಸೋಜಾ ಕೃಷಿಯ ಬಗ್ಗೆ ಮಾಹಿತಿ ನೀಡಿದರು.
ಬಂಟ್ವಾಳ ತೋಟಗಾರಿಕೆ ಇಲಾಖೆಯ ಮಂಜುನಾಥ ಸ್ವಾಗತಿಸಿ ನಿರೂಪಿಸಿದರು. ದಲಿತ್ ಸೇವಾ ಸಮಿತಿ ಕಾರ್ಯದರ್ಶಿ ಚಂದ್ರಶೇಖರ ಯು ವಂದಿಸಿದರು. ಅರ್ಜಿದಾರರಿಗೆ ಕೃಷಿ ಬೀಜ, ಮಲ್ಲಿಗೆ ಗಿಡ ಮತ್ತು ಜೇನು ಪೆಟ್ಟಿಗೆ ವಿತರಿಸಲಾಯಿತು.

