ಬಂಟ್ವಾಳ:  ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯತ್ ಗಳಲ್ಲಿ ವಿವಿಧ ಬೇಡಿಕೆಗಳಿಗೆ ಸಲ್ಲಿಸಿರುವ ಜಮೀನು ಕಾದಿರುಸುವಿಕೆ ಜಮೀನಿನ ಕಡತಗಳನ್ನು ಶೀಘ್ರ ವಿಲೇವಾರಿಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ  ದಕ್ಷಿಣ ಕನ್ನಡ ಜಿಲ್ಲಾ ಗ್ರಾಮ ಪಂಚಾಯತ್ ಪ್ರತಿನಿಧಿಗಳ ಒಕ್ಕೂಟದ ವತಿಯಿಂದ ಕಂದಾಯ ಸಚಿವ ಆರ್.ಆಶೋಕ್ ಅವರಿಗೆ ಮನವಿ ಸಲ್ಲಿಸಲಾಯಿತು.    ಈಗಾಗಲೇ ಘನತ್ಯಾಜ್ಯ, ಸ್ಮಶಾನ, ದಫನ ಭೂಮಿ, ನಿವೇಶನ ಇತ್ಯಾದಿ ಸಾರ್ವಜನಿಕ ಉದ್ದೇಶಗಳಿಗೆ ಗ್ರಾಮ ಪಂಚಾಯತ್ ಗಳು ಗುರುತಿಸಿ ಬೇಡಿಕೆ ಸಲ್ಲಿಸಿರುವ ಜಮೀನು ಕಾದಿರಿಸುವಿಕೆ ಕಡತಗಳು ಕಂದಾಯ ಇಲಾಖೆಯ ವಿವಿಧ ಹಂತಗಳಲ್ಲಿ ವಿಳಂಬವಾಗುತ್ತಿರುವುದರಿಂದ ಗ್ರಾಮಸ್ಥರ ಮೂಲಭೂತ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ತೊಂದರೆಯಾಗುತ್ತಿದೆ ಎಂದು   ಮನವಿಯಲ್ಲಿ ತಿಳಿಸಲಾಗಿದೆ.

18-15-53-IMG-20191021-WA0044-1068x859

ಒಕ್ಕೂಟದ ಅಧ್ಯಕ್ಷ ಸುಭಾಷ್ ಚಂದ್ರ ಶೆಟ್ಟಿಯವರ ನೇತೃತ್ವದಲ್ಲಿ ಬಂಟ್ವಾಳ ಪ್ರವಾಸಿ ಮಂದಿರದಲ್ಲಿ ಸೋಮವಾರ ಕಂದಾಯ ಸಚಿವ ಆರ್.ಅಶೋಕ್ ರವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು.. ಇದಕ್ಕೆ ಸ್ಪಂದಿಸಿದ ಸಚಿವರು ಈ  ವಿಷಯದ ಬಗ್ಗೆ ಪ್ರಥಮ ಆದ್ಯತೆ ನೀಡುವುದಲ್ಲದೆ ಸರಕಾರದ ಮಟ್ಟದಲ್ಲೂ ವಿಶೇಷ ಗಮನ ಹರಿಸುವುದಾಗಿ ಭರವಸೆ ನೀಡಿದರು. ಇರಾ ಗ್ರಾಮ ಪಂಚಾಯತ್ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ, ಒಕ್ಕೂಟದ ಸದಸ್ಯರಾದ ಪವಿತ್ರ ಪೂಂಜಾ ಮೊದಲಾದವರಿದ್ದರು.

By suddi9

Leave a Reply

Your email address will not be published. Required fields are marked *