ಬಂಟ್ವಾಳ: ರಾಜ್ಯ ಮಟ್ಟದ ಮಕ್ಕಳ ಕಲಾ ಉತ್ಸವ ಮತ್ತು ಕಲಾಶ್ರೀ ಪ್ರಶಸ್ತಿ ಆಯ್ಕಾ ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ವಿದ್ಯಾಗಿರಿಯ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ವಿದ್ಯಾರ್ಥಿನಿ ಪ್ರಣಮ್ಯ ರಾವ್ ಭರತನಾಟ್ಯ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ವಿದ್ಯಾರ್ಥಿನಿ ರಿಯಾನಾ ಸೋನಾಲಿ ಪಿಂಟೊ ವಿಜ್ಞಾನ ಮಾದರಿ ತಯಾರಿಯಲ್ಲಿ ದ್ವಿತೀಯ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆಂದು ಪ್ರಕಟನೆ ತಿಳಿಸಿದೆ.
