ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಪಂಜಿಕಲ್ಲು ಗ್ರಾಮ ಪಂಚಾಯಿತಿನಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ನಡೆಸಲಾಗಿರುವ ಕಾಮಗಾರಿಗಳಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಸೋಮವಾರ ಭೇಟಿ ನೀಡಿದರು.

29btl-panjikal

ಲೋಕಾಯುಕ್ತರ ಭೇಟಿ, ಕಡತ ಪರಿಶೀಲನೆ
ತಾಲ್ಲೂಕಿನ ಪಂಜಿಕಲ್ಲು ಗ್ರಾಮ ಪಂಚಾಯಿತಿನಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ನಡೆಸಲಾಗಿರುವ ಕಾಮಗಾರಿಗಳಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಸೋಮವಾರ ಭೇಟಿ ನೀಡಿ ಕಡತ ಪರಿಶೀಲನೆ ನಡೆಸಿದ ಘಟನೆ ನಡೆದಿದೆ.
ಕಳೆದ 2010-11ನೇ ಸಾಲಿನಲ್ಲಿ ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಪಂಜಿಕಲ್ಲು ಭ್ರಷ್ಟಾಚಾರ ಹಾಗೂ ದೌರ್ಜನ್ಯ ವಿರೋಧಿ ವೇದಿಕೆ ಸಂಚಾಲಕ ಸುದರ್ಶನ್ ಜೈನ್ ಮತ್ತಿತರರು ಆ.19 ರಂದು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.
ಈ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ತನಿಖಾಧಿಕಾರಿ ನಾಸಿರಾ ನೇತೃತ್ವದ ತಂಡವು ಸೋಮವಾರ ಇಲ್ಲಿನ ಪಂಚಾಯಿತಿ ಕಚೇರಿಗೆ ಭೇಟಿ ನಿಡಿ ತನಿಖೆ ನಡೆಸಿದೆ.
ಈ ಯೋಜನೆಗೆ ಸಂಬಂಧಿಸಿದಂತೆ ದಾಖಲಿಸಲಾಗಿರುವ ವಿವಿಧ ಕಡತಗಳು ಮತ್ತು ಕೈಗೊಂಡಿರುವ ವಿವಿಧ ಕಾಮಗಾರಿಗಳನ್ನು ತಂಡವು ಪರಿಶೀಲನೆ ನಡೆಸಿ, ಇಲ್ಲಿನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಿಂದ ಮಾಹಿತಿ ಸಂಗ್ರಹಿಸಿದರು.
ಬಂಟ್ವಾಳ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಸಿಫ್ರಿಯನ್ ಮಿರಾಂದಾ, ಜಿ.ಪಂ.ಇಂಜಿನಿಯರ್ ಗಿರೀಶ್, ಜಗದೀಶ್, ಮಂಜು ವಿಟ್ಲ, ಗ್ರಾಮ ಪಂಚಾಯತ್ ಅಧ್ಯಕ್ಷ ಸಂಜೀವ ಪೂಜಾರಿ, ಸದಸ್ಯರಾದ ಸದಾನಂದ ಶೆಟ್ಟಿ, ಮೋಹನ ಶೆಟ್ಟಿ ಮತ್ತಿತರರು ಇದ್ದರು.

By Suddi9

Leave a Reply

Your email address will not be published. Required fields are marked *