ಬಂಟ್ವಾಳ: ಪುರಾಣ ಪ್ರಸಿದ್ಧ ಬಂಟ್ವಾಳ ತಾಲೂಕಿನ ವಾಮದಪದವು ಸಮೀಪದ ಅಜ್ಜಿಬೆಟ್ಟು ಗ್ರಾಮದ ಪದವು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಸುಮಾರು ೨ ಕೋ. ರೂ ವೆಚ್ಚದಲ್ಲಿ ಪುನರ್ನಿರ್ಮಾಣಗೊಳ್ಳುತ್ತಿದ್ದು, ಆ ಪ್ರಯುಕ್ತ ಸೋಮವಾರ ಶ್ರೀ ಕ್ಷೇತ್ರದಲ್ಲಿ ನೂತನ ದೇವಸ್ಥಾನಕ್ಕೆ ನಿಧಿ ಕುಂಭಾದಿ ಷಢಾಧಾರ ಪ್ರತಿಷ್ಠೆ ಮತ್ತು ಇಷ್ಟಿಕಾನ್ಯಾಸ, ಗರ್ಭಾನ್ಯಾಸ ಕಾರ್ಯಕ್ರಮ ನಡೆಯಿತು.

0411pkt1
ಕ್ಷೇತ್ರದ ತಂತ್ರಿ ಶ್ರೀಪಾದ ಪಾಂಗಣ್ಣಾಯ ಅವರ ನೇತೃತ್ವದಲ್ಲಿ , ಕ್ಷೇತ್ರದ ವಾಸ್ತು ತಜ್ಞ ಸುಬ್ರಹ್ಮಣ್ಯ ತಂತ್ರಿ ಗುಂಡಿಬೆÊಲು ಅವರ ಮಾರ್ಗದರ್ಶನದಲ್ಲಿ ಅರ್ಚಕ ವೃಂದದ ಸಹಕಾರದಲ್ಲಿ ವಿವಿಧ ವೈದಿಕ ವಿಽ ವಿಧಾನಗಳು ನಡೆಯಿತು. ನ.೩ರಂದು ರಾತ್ರಿ ವಾಸ್ತು ಪೂಜೆ, ಅಽವಾಸ ಹೋಮ ನಡೆಯಿತು. ನ.೪ರಂದು ಬೆಳಗ್ಗೆ ಮಹಾಗಣಪತಿ ಹೋಮ, ನಿಽ ಕುಂಭಾದಿ ಷಢಾಧಾರ ಪ್ರತಿಷ್ಠೆ, ಶ್ರೀ ದೇವರಿಗೆ ಕಲಶ, ಮಹಾಪೂಜೆ, ಅನ್ನ ಸಂತರ್ಪಣೆ, ಸಂಜೆ ಇಷ್ಟಿಕಾನ್ಯಾಸ, ಗರ್ಭಾನ್ಯಾಸ ಕಾರ್ಯಕ್ರಮ ನಡೆಯಿತು.

20191104_103411
ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಕುಂಡೋಳಿಗುತ್ತು, ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ವಸಂತ ಶೆಟ್ಟಿ ಕೇದಗೆ, ಮುಂಬÉÊ ಸಮಿತಿ ಅಧ್ಯಕ್ಷ ಅಶೋಕ್ ಪಕ್ಕಳ ಸನ್ನಿಽಗುತ್ತು, ಬೆಂಗಳೂರು ಸಮಿತಿ ಅಧ್ಯಕ್ಷ ಮೋಹನದಾಸ ಶೆಟ್ಟಿ, ವ್ಯವಸ್ಥಾಪನ ಸಮಿತಿ,ಜೀರ್ಣೋದ್ಧಾರ ಸಮಿತಿ, ವಿವಿಧ ಗ್ರಾಮ ಸಮಿತಿ, ಮುಂಬÉÊ, ಬೆಂಗಳೂರು ಸಮಿತಿ ಪದಾಽಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *