ಮುತ್ತೂರು: ಮುತ್ತೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕುಮಾರಿ ಪ್ರೀತಿ ಇವರು ಇತ್ತೀಚೆಗೆ ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ‘ಪೋಲ್ ವಾಲ್ಟ್’ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಪಂಜಾಬ್‌ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಗೊಂಡಿರುತ್ತಾರೆ.

Preethi GPUC Muttur-1

ತೀರಾ ಹಿಂದುಳಿದ ಗ್ರಾಮೀಣ ಪ್ರದೇಶದಲ್ಲಿರುವ ಮುತ್ತೂರಿನ ಈ ಕ್ರೀಡಾ ಪ್ರತಿಭೆಯ ತರಬೇತುದಾರರು ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕರಾಗಿರುವ ಶ್ರೀ ದರ್ಶನ್ ರವರು. ಈ ಸ್ಥಳಿಯ ಪ್ರತಿಭೆಗೆ ಹೆಚ್ಚಿನ ಪ್ರೋತ್ಸಾಹ ದೊರೆತಲ್ಲಿ ಜಿಲ್ಲೆಯ ಕೀರ್ತಿ ಹೆಚ್ಚುವುದರಲ್ಲಿ ಸಂಶಯವಿಲ್ಲ. ಇವರನ್ನು ಕಾಲೇಜು ಅಭಿವೃದ್ಧಿ ಸಮಿತಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವರ್ಗ ಅಭಿನಂದಿಸಿದೆ

By suddi9

Leave a Reply

Your email address will not be published. Required fields are marked *