ಬಂಟ್ವಾಳ: ವೀರಕಂಭ ಗ್ರಾಮ ಪಂಚಾಯತ್ ವತಿಯಿಂದ ಮಕ್ಕಳ ಗ್ರಾಮಸಭೆಯು ಗ್ರಾಮ ಪಂಚಾಯತ್ ನ ರಾಜೀವ್ ಗಾಂಧಿ ಸಭಾಭವನದಲ್ಲಿ ನಡೆಯಿತು. ಪಂಚಾಯತ್ ಅಧ್ಯಕ್ಷೆ ಪ್ರೇಮಲತಾ ರವರು ಅಧ್ಯಕ್ಷತೆ ವಹಿಸಿದ್ದರು .ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಿರಿಜಾ ರವರು ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿ ನೀಡಿದರು.
ವೀರಕಂಭ ಗ್ರಾಮ ವ್ಯಾಪ್ತಿಯ ಕಿರಿಯ ಆರೋಗ್ಯ ಸಹಾಯಕಿ ಜ್ಯೋತಿ ಕೆ ಮಕ್ಕಳ ಆರೋಗ್ಯ ಬಗ್ಗೆ ಮಾಹಿತಿ ಒದಗಿಸಿದರು . ವೇದಿಕೆಯಲ್ಲಿ ಪಂಚಾಯತ್ ಸದಸ್ಯರುಗಳಾದ ರಾಮಚಂದ್ರ ಪ್ರಭು, ಜಯಂತಿ ಜನಾರ್ಧನ್, ಮಜಿ ಶಾಲಾ ವಿದ್ಯಾರ್ಥಿ ನಾಯಕ ಉದಿತ್ ರಾಜ್, ಕೆಲಿಂಜ ಶಾಲಾ ವಿದ್ಯಾರ್ಥಿ ನಾಯಕ ಉಮ್ಮರ್ ಫಾರೂಕ್, ಬಾಯಿಲ ಶಾಲೆಯ ವಿದ್ಯಾರ್ಥಿ ನಾಯಕಿ ಹರ್ಷಿತಾ ಬಿ ,ಉಪಸ್ಥಿತರಿದ್ದರು
