ಬಂಟ್ವಾಳ : ಪಾದಾಚಾರಿಯೋರ್ವರಿಗೆ ಡಿಕ್ಕಿ ಹೊಡೆದು ಪರಾರಿಯಾಗಿರುವ ಕಂಟ್ರಾಕ್ಟ್ ಕ್ಯಾರೇಜ್ ಬಸ್ ಚಾಲಕ ಹಾಗೂ ನಿರ್ವಾಹಕನ ವಿರುದ್ಧ ಬಂಟ್ವಾಳ ಸಂಚಾರಿ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ. ಸೋಮವಾರ ರಾತ್ರಿ ಬಿ ಸಿ ರೋಡಿನ ಹೆದ್ದಾರಿಯಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ನೇರಳಕಟ್ಟೆ ನಿವಾಸಿ ಪತ್ರಕರ್ತ ಅಬ್ದುಲ್ ಲತೀಫ್ ಎಂಬವರಿಗೆ ಮಂಗಳೂರಿನಿಂದ ಧಾವಿಸಿ ಬಂದ ಅರಫಾ ಎಂಬ ಹೆಸರಿನ ಕಂಟ್ರಾಕ್ಟ್ ಕ್ಯಾರಿಯೇಜ್ ಬಸ್ ಚಾಲಕ ಪ್ರಯಾಣಿಕರನ್ನು ಹತ್ತಿಸುವ ಹಾಗೂ ಇಳಿಸುವ ಧಾವಂತದಲ್ಲಿ ಡಿಕ್ಕಿ ಹೊಡೆದಿದೆ.
ಅಪಘಾತದ ತೀವ್ರತೆಗೆ ಗಂಬೀರ ಗಾಯಗೊಂಡ ಲತೀಫ್ ಬಗ್ಗೆ ಯಾವುದೇ ನಿಗಾ ವಹಿಸದ ಬಸ್ಸು ಚಾಲಕ ಹಾಗೂ ನಿರ್ವಾಹಕರು ಬಸ್ ಸಮೇತ ಸ್ಥಳದಿಂದ ಪರಾರಿಯಾಗಿದ್ದು, ಸಾರ್ವಜನಿಕರು ಗಾಯಾಳವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಬಂಟ್ವಾಳ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.
