ಬಂಟ್ವಾಳ : ಶ್ರೀ ವೆಂಕಟರಮಣ ಸ್ವಾಮಿ ಪದವಿ ಪೂರ್ವ ಕಾಲೇಜು  ಮಾನವಿಕ ಸಂಘದ ವತಿಯಿಂದ ಅತಿಥಿ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶ್ರೀಮತಿ ಕೆ ಪ್ರತಿಭಾ ಸುಬ್ರಹ್ಮಣ್ಯ ಇವರನ್ನು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ  ವಿದ್ಯಾರ್ಥಿಗಳಿಗೆ ಯೋಗದ ಮಹತ್ವ ಮತ್ತು ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗಿ ಯೋಗ ಮತ್ತು ಮುದ್ರೆಗಳು ಹಾಗೂ ಸುಸಂಸ್ಕೃತ ಮಾನವರಾಗಿ ಬಾಳಲು ಯೋಗದ ಮಹತ್ವದ ಬಗ್ಗೆ ಉಪನ್ಯಾಸಗೈದರು.

DSC_0244

ಕಾರ್ಯಕ್ರಮದಲ್ಲಿ ಪ್ರಾಂಶುಪಾಲೆ ಶಶಿಕಲಾ ಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಾನವಿಕ ಸಂಘದ ಅಧ್ಯಕ್ಷೆ  ಪ್ರಭಾವತಿ. ಎಸ್ ಪ್ರಾಸ್ತಾವಿಕ ಮಾತುಗಳೊಂದಿಗೆ ಅತಿಥಿ ಪರಿಚಯಿಸಿದರು. ಮಾನವಿಕ ಸಂಘದ ಕಾರ್ಯದರ್ಶಿ ಆಶಿಕಾ ಸ್ವಾಗತಿಸಿ, ಜತೆಕಾರ್ಯದರ್ಶಿ ಚೈತ್ರಾಂಜಲಿ ವಂದಿಸಿದರು. ವಿದ್ಯಾರ್ಥಿನಿ ಪಂಚಮಿ ಕಾರ್ಯಕ್ರಮ ನಿರೂಪಿಸಿದರು.DSC_0255

By suddi9

Leave a Reply

Your email address will not be published. Required fields are marked *