ಬಂಟ್ವಾಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಬಂಟ್ವಾಳ ಇವರ ವತಿಯಿಂದ ಪ್ರಧಾನ ಮಂತ್ರಿ ಮಾತೃ ವಂದನಾ ಸಪ್ತಾಹದ ಉದ್ಘಾಟನಾ ಸಮಾರಂಭ ಬಂಟ್ವಾಳ ತಾಪಂ ನ ಎಸ್.ಜಿ.ಎಸ್..ವೈ ಸಭಾಂಗಣದಲ್ಲಿ ಬುಧವಾರ ನಡೆಯಿತು. ತಾಪಂ ನ ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ವಿ.ಶೆಟ್ಟಿ ಅವರು ಮಾತೃವಂದನಾ ಸಪ್ತಾಹವನ್ನು ಉದ್ಘಾಟಿಸಿ ಚಾಲನೆ ನೀಡಿ ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಸಿದ್ದ ತಾ.ಪಂ. ಉಪಾಧ್ಯಕ್ಷ ಅಬ್ಬಾಸ್ ಅಲಿ ಮಾತನಾಡಿ , ತಾಯಿ ಎಂಬ ಶಬ್ದವು ಅದು ಬಣ್ಣಿಸಲು ಅಸಾಧ್ಯವಾದುದು, ಹಾಗಾಗಿ ತಾಯಿಯ ಮಹತ್ವವನ್ನು ಅರಿತುಕೊಂಡು ಇಲಾಖೆ ಗರ್ಭಿಣಿ ಮಹಿಳೆಯರಿಗೆ ಆರೋಗ್ಯದ ಉದ್ದೇಶದಿಂದ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಯೋಜನೆ ಯನ್ನು ಪ್ರತಿಯೊಬ್ಬ ಮಹಿಳೆಯರು ಸದುಪಯೋಗ ಪಡಿಸಿಕೊಳ್ಳ ಬೇಕೆಂದರು.
ಕಾರ್ಯನಿರ್ವಣಾಧಿಕಾರಿ ರಾಜಣ್ಣ, ಉಪಸ್ಥಿತರಿದ್ದರು.ಹಿರಿಯ ಮೇಲ್ವಿಚಾರಕಿ ಗಾಯತ್ರಿ ಕಂಬಳಿ ಪ್ರಸ್ತಾವಿಕವಾಗಿ ಮಾತನಾಡಿದರು.ಸಿ.ಡಿ.ಪಿ.ಒ.ಶ್ರೀಲತಾ ಎಸ್.ಸ್ವಾಗತಿಸಿ, ಮೇಲ್ವಿಚಾರಕಿ ಸವಿತಾ ವಂದಿಸಿದರು.
ಹಿರಿಯ ಮೇಲ್ವಿಚಾರಕಿ ಭಾರತಿ ಕಾರ್ಯಕ್ರಮ ನಿರೂಪಿಸಿದರು.

