ಅಡ್ಯನಡ್ಕ: ಅಂತಾರಾಷ್ಟ್ರೀಯ ಈಜು ತರಬೇತುದಾರ ಪಾರ್ಥ ವಾರಣಾಶಿ ಅವರಿಂದ ಈಜು ಮತ್ತು ಸ್ಕೇಟಿಂಗ್ ಬಗ್ಗೆ ಮಾಹಿತಿ ಕಾರ್ಯಕ್ರಮವು ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಯಲ್ಲಿ ಡಿ.4ರಂದು ಜರುಗಿತು.ಈಜುವಿಕೆಯಲ್ಲಿ ಬಳಸುವ ಕೌಶಲಗಳು, ತರಬೇತಿಯ ವಿಧಾನ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಈಜು ಸ್ಪರ್ಧೆಗಳ ಪದ್ಧತಿಯ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರಲ್ಲದೆ, ಸ್ಕೇಟಿಂಗ್ ಬಗ್ಗೆ ಮಾಹಿತಿ ನೀಡಿದರು. ಜನತಾ ಪದವಿಪೂರ್ವ ಕಾಲೇಜು ಹಾಗೂ ಜನತಾ ಪ್ರೌಢಶಾಲೆಯ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.Eeju maththu scating mahithi

ಪ್ರಾಂಶುಪಾಲ ಡಿ. ಶ್ರೀನಿವಾಸ್ ಸ್ವಾಗತಿಸಿ, ವಂದಿಸಿದರು. ಉಪನ್ಯಾಸಕ ಗಣೇಶ್ ಕೆ. ಆರ್. ನಿರ್ವಹಿಸಿದರು.

By suddi9

Leave a Reply

Your email address will not be published. Required fields are marked *