ಬಂಟ್ವಾಳ: ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಮೋಹನ್ ಕುಮಾರ್ ಅವರನ್ನು ಬಂಟಾಳ ತಾಲೂಕು ಪಂಚಾಯಿತಿ ಮಾಸಿಕ ಕೆಡಿಪಿ ಸಭೆಯಲ್ಲಿ ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರಾ ಸನ್ಮಾನಿಸಿದರು. ಈ ಸಂದರ್ಭ ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಅಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ, ಸಮಾಜಕಲ್ಯಾಣ ಇಲಾಖೆ ವಸತಿ ಶಾಲೆಯ ಮುಖ್ಯೋಪಾಧ್ಯಾಯ ಪ್ರಸಾದ್ ಉಪಸ್ಥಿತರಿದ್ದರು.

