ಬಂಟ್ವಾಳ: ರಾರಾಸಂ ಫೌಂಡೇಶನ್ ಬಂಟ್ವಾಳ ಇದರ 9ನೇ ವರ್ಷದ ಸಾಂಸ್ಕøತಿಕ ಕಲರವ ರಾರಾಸಂಭ್ರಮ ಬುಧವಾರ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು.
ಜಿಲ್ಲಾ ಪಂಚಾಯಿತಿ ಸದಸ್ಯ ಕೆ. ರವೀಂದ್ರ ಕಂಬಳಿ ಕಾರ್ಯಕ್ರಮ ಉದ್ಘಾಟಿಸಿದರು. ಅವರು ಮಾತನಾಡಿ ಸ್ಥಳೀಯ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ 9 ವರ್ಷಗಳಿಂದ ರಾರಸಂಭ್ರಮ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿರುವುದು ಅಭಿನಂದನೀಯ, ಶಾಲೆಗಳಲ್ಲಿ ಮಾತ್ರವಲ್ಲದೆ ಸಂಘ ಸಂಸ್ಥೆಗಳು ಕೂಡ ವಿದ್ಯಾರ್ಥಿಗಳ ಪ್ರತಿಭೆಗೆ ಪ್ರೋತ್ಸಾಹ ನೀಡುವುದು ಉತ್ತಮ ಕಾರ್ಯ ಎಂದರು.

ಬಿಎಸ್‍ಎನ್‍ಎಲ್ ನಿವೃತ್ತ ಎಜಿಎಂ ಎಂ.ಕೃಷ್ಣಶ್ಯಾಮ್, ತಾಲೂಕು ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷ ಮುರಳೀಕೃಷ್ಣ ರಾವ್, ಬಂಟ್ವಾಳ ಸಾರ್ವಜನಿಕ ಉದ್ಯೋಗಸ್ಥರ ಸಹಕಾರಿ ಸಂಘದ ಕಾರ್ಯನಿರ್ವಾಹಣಾಧಿಕಾರಿ ರಮೇಶ್ ಸಾಲ್ಯಾನ್, ಪತ್ರಕರ್ತ ಸಂದೀಪ್ ಸಾಲ್ಯಾನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ರಾರಾಸಂ ಫೌಂಡೇಶನ್ ನಿರ್ದೇಶಕ ಕೇಶವ ಮಾಸ್ತರ್ ಸ್ವಾಗತಿಸಿದರು, ರಾಧಕೃಷ್ಣ ಬಂಟ್ವಾಳ ಪ್ರಾಸ್ತವಿಕವಾಗಿ ಮಾತನಾಡಿದರು, ನಿರ್ದೇಶಕ ನಾಗೇಶ್ ಬಾಳೆಹಿತ್ಲು ವಂದಿಸಿದರು. ದಾಮೋದರ ಮಾಸ್ತರ್ ಏರ್ಯ ಕಾರ್ಯಕ್ರಮ ನಿರೂಪಿಸಿದರು. ಬಳಿಕ ವಿವಿಧ ಸ್ಪರ್ಧಾ ಚಟುವಟಿಕೆಗಳು ನಡೆದವು.
ಚಿತ್ರ: ರಾರಾಸಂ ಫೌಂಡೇಶನ್ ಬಂಟ್ವಾಳ ಇದರ 9ನೇ ವರ್ಷದ ಸಾಂಸ್ಕøತಿಕ ಕಲರವ ರಾರಾಸಂಭ್ರಮ ಜಿಲ್ಲಾ ಪಂಚಾಯಿತಿ ಸದಸ್ಯ ಕೆ. ರವೀಂದ್ರ ಕಂಬಳಿ, ಬಿಎಸ್‍ಎನ್‍ಎಲ್ ನಿವೃತ್ತ ಎಜಿಎಂ ಎಂ.ಕೃಷ್ಣಶ್ಯಾಮ್, ತಾಲೂಕು ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷ ಮುರಳೀಕೃಷ್ಣ ರಾವ್, ಬಂಟ್ವಾಳ ಸಾರ್ವಜನಿಕ ಉದ್ಯೋಗಸ್ಥರ ಸಹಕಾರಿ ಸಂಘದ ಕಾರ್ಯನಿರ್ವಾಹಣಾಧಿಕಾರಿ ರಮೇಶ್ ಸಾಲ್ಯಾನ್, ಪತ್ರಕರ್ತ ಸಂದೀಪ್ ಸಾಲ್ಯಾನ್ ಉಪಸ್ಥಿತರಿದ್ದರು.
