ಕೈಕಂಬ;ಅವರ್ ಲೇಡಿ ಆಫ್ ಪೊಂಪೈ ಆಂಗ್ಲಮಾಧ್ಯಮ ಶಾಲೆ ಕೈಕಂಬ ಇದರ ವಾರ್ಷಿಕೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಶಾಲಾ ಆವರಣದಲ್ಲಿ ನಡೆಯಿತು. ಭಾರತ್ ಮಾತಾ ಟ್ರಸ್ಟಿನ ಅಧ್ಯಕ್ಷರಾದ ವಾಲ್ಡರ್ ಸ್ಟೀಫನ್ ಮೆಂಡಿಸ್ ಅಧ್ಯಕ್ಷತೆ ವಹಿಸಿದ್ದರು.
ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ವಿನೋದ್ ಮಾಡ ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯ ವಿದ್ಯಾಸಂಸ್ಥೆಗಳ ಪ್ರಮುಖ ಗುರಿಯಾಗಬೇಂದರು. ಸಾಧಕ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಶಾಲಾ ಸಂಚಾಲಕಿ ಫ್ಲೋರೆನ್ಸ್ ಮೆಂಡಿಸ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಹೇಮಚಂದ್ರ, ಉಪಾಧ್ಯಕ್ಷೆ ಪ್ರಭಾವಾಜ್, ಮುಖ್ಯ ಶಿಕ್ಷಕಿ ಸ್ವರ್ಣಲತಾ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಮಹೇಶ್ ಶೆಟ್ಟಿ ಸ್ವಾಗತಿಸಿದರು.ವೀಣಾ ಶಾರದ ವಂದಿಸಿದರು. ಹಸೀನ್ ಕಾರ್ಯಕ್ರಮ ನಿರೂಪಿಸಿದರು.
