ಬಂಟ್ವಾಳ: ಅಸ್ಪ್ರಶ್ಯತೆಯನ್ನು ನಿವಾರಿಸಿ ನಾವೆಲ್ಲರೂ ಒಂದೇ ಎನ್ನುವ ಭಾವನೆಯೊಂದಿಗೆ ಒಟ್ಟು ಸೇರಿ ದೈವಗಳ ಆರಾಧನೆ ಮಾಡಿದಾಗ ಊರು ಅಭಿವೃದ್ದಿ ಯಾಗಲಿದೆ ಎಂದು ಕಣಿಯೂರು ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಶ್ರೀ ಮಹಾಬಲ ಸ್ವಾಮೀಜಿ ಹೇಳಿದರು.ದೇವರಾಜ ಕೋರ್ದಬ್ಬು ದೈವಸ್ಥಾನ ಸುಜೀರು ಇದರ ವಾರ್ಷಿಕ ನೇಮೋತ್ಸದ ಪ್ರಯುಕ್ತ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.ಕಾರಣಿಕದ ದೈವಗಳ ಇತಿಹಾಸವನ್ನು ತಿಳಿದುಕೊಂಡು ಮಕ್ಕಳಿಗೆ ಕಲಿಸುವ ಕಾರ್ಯ ಆಗಬೇಕಿದೆ ಎಂದರು.
ಶಾಸಕ ಯು.ಟಿ.ಖಾದರ್ ಮಾತನಾಡಿ ಧಾರ್ಮಿಕ ಕೆಂದ್ರಗಳು ಬೆಳಕಿದರೆ ಮಾತ್ರ ಆ ಪ್ರದೇಶ ಬೆಳಗಲು ಸಾಧ್ಯವಿದೆ. ಹಿರಿಯರು ಹಾಕಿಕೊಟ್ಟ ಮಾರ್ಗದಲ್ಲಿ ಯುವಕರು ಮುಂದುವರಿದಾಗ ಸಾಮರಸ್ಯದ ಜೀವನ ನಡೆಸಲು ಸಾಧ್ಯವಿದೆ ಎಂದರು. ಎಂದರು.ಮುಖ್ಯ ಅತಿಥಿಗಳಾಗಿ ಬಿ.ಸಿ.ರೋಡಿನ ಶ್ರೀ ಚಂಡಿಕಾ ಪರಮೇಶ್ವರೀ ದೇವಿ ದೇವಸ್ಥಾನದ ಮುಕ್ತೇಸರ ಲೋಕನಾಥ ಶೆಟ್ಟಿ, ಪ್ರಮುಖರಾದ ದಿನೇಶ್ ಶೆಟ್ಟಿ ಕೊಟ್ಟಿಂಜ, ಸುಜೀರ್ ಶಂಕರ ಕಂಬಳಿ, ಗುರಿಕಾರ ಮುದರ ದೆಯ್ಯಡ್ಕ, ಪುದು ಗ್ರಾ.ಪಂ.ಸದಸ್ಯ ರಮ್ಲಾನ್ ಮಾರಿಪಳ್ಳ, ಉಪಾಧ್ಯಕ್ಷೆ ಲೀಡಿಯಾ ಪಿಂಟೊ, ಜಿ.ಪಂ.ಮಾಜಿ ಸದಸ್ಯ ಉಮ್ಮರ್ ಫಾರೂಕ್ ಉಪಸ್ಥಿತರಿದ್ದರು. ಆಡಳಿತ ಮಂಡಳಿ ಅಧ್ಯಕ್ಷ ಅರುಣ್ ಕುಮಾರ್ ನುಳಿಯಾಲ್ ಗುತ್ತು ಸ್ವಾಗತಿಸಿದರು. ರಮ್ಯ ಕಾರ್ಯಕ್ರಮ ನಿರೂಪಿಸಿದರು. ಸಾರ್ವಜನಿಕ ಶನಿಪೂಜೆಯ ಮಹಾಪೂಜೆ ನಡೆದು ಪ್ರಸಾದ ವಿತರಿಸಲಾಯಿತು.
