ಬಂಟ್ವಾಳ:    ಕಲ್ಲಡ್ಕ. ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ  ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ಡಾಮೀಜಿಗಳಿಗೆ ನುಡಿನಮನ ಸಲ್ಲಿಸಲಾಯಿತು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರು   ನುಡಿನಮನ  ಸಲ್ಲಿಸುತ್ತಾ, ಸ್ಡಾಮೀಜಿಯವರು ಸಮಾಜದಲ್ಲಿ ದೀನ ದಲಿತರಿಗಾಗಿ ಮಾಡಿದ ಸೇವೆ ಅಗಾಧವಾದುದು.IMG-20191230-WA0000

ಪ್ರತಿ ಜೀವಿಯಲ್ಲೂ ದೇವರನ್ನು ಕಂಡ ಮಹಾನ್ ಕೃಷ್ಣಭಕ್ತ ಮರೆಯಾಗಿರುವುದು ದುಃಖದ ಸಂಗತಿ. ಅವರ ಲಕ್ಷಾಂತರ ಸಾಮಾಜಿಕ ಪರಿವರ್ತನೆಗಳು ಹಾಗೂ ರಾಷ್ಟ್ರದ ಬಗೆಗಿನ ಚಿಂತನೆಗಳನ್ನು ನಾವು ಸದಾ ನೆನಪಿಟ್ಟುಕೊಳ್ಳುವಂತಾಗಬೇಕು ಎಂದರು. ಈ ಸಂಧರ್ಭದಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮತ್ತು ಶ್ರದ್ಧಾಂಜಲಿ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಕೃಷ್ಣಪ್ರಸಾದ ಕಾಯರ್‌ಕಟ್ಟೆ, ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *