ಬಂಟ್ವಾಳ: ಸ್ವಚ್ಛ ಮನಸು ಹಾಗೂ ಸ್ವಸ್ಥ ಮನಸಿನಿಂದ ಸಾಮಾಜಿಕ ಸೌಹಾರ್ದತೆ ಮತ್ತು ಆರೋಗ್ಯ ಪೂರ್ಣ ಸಮಾಜ ನಿರ್ಮಾಣ ಸಾಧ್ಯ, ಇದಕ್ಕೆ ಸುಧಾರಿತ ಕಲಿಕಾ ಕ್ರಮ ಪೂರಕ ಎಂದು ಮಂಗಳೂರು ವಿಶ್ವವಿದ್ಯಾಲಯದ ಉಪ ಕುಲಪತಿ ಪ್ರೊ. ಯಡಪಡಿತ್ತಾಯ ಹೇಳಿದ್ದಾರೆ.

31 btl melkar (1)
ಮಂಗಳೂರು ಎಜುಕೇಶನ್ ಎನ್‌ಹ್ಯಾನ್ಸ್‌ಮೆಂಟ್ ಟ್ರಸ್ಟ್‌ನಡಿ ಸಜೀಪ ಮುನ್ನೂರಿನ ಮಾರ್ನಬೈಲ್‌ನಲ್ಲಿ ಕಾರ್ಯಾಚರಿಸುತ್ತಿರುವ ಮೆಲ್ಕಾರ್ ಮಹಿಳಾ ಪದವಿ ಪೂರ್ವ ಹಾಗೂ ಪದವಿ ಕಾಲೇಜಿನ ೧೧ನೇ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು. ಯೆನೆಪೋಯ ವಿಶ್ವವಿದ್ಯಾಲಯದ ಸಹ ಕುಲಾಧಿಪತಿ ಪರ್ಹಾದ್ ಯೆನೆಪೋಯ, ಮಂಗಳೂರು ಎಜುಕೇಶನ್ ಎನ್‌ಹ್ಯಾನ್ಸ್‌ಮೆಂಟ್ ಟ್ರಸ್ಟ್‌ನ ಅಧ್ಯಕ್ಷ ಎಸ್.ಎಂ. ರಶೀದ್ ಹಾಜಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲ ಬಿ.ಕೆ. ಅಬ್ದುಲ್ ಲತೀಫ್ ವಾರ್ಷಿಕ ವರದಿ ವಾಚಿಸಿದರು. ಪ್ರಸಕ್ತ ಸಾಲಿನಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಉಪಪ್ರಾಂಶುಪಾಲೆ ಸುನೀತಾ ಪೆರೇರಾ, ಮುಹಮ್ಮದ್ ಶಿಬಾಬ್ ಬಹುಮಾನಗಳ ಪಟ್ಟಿ ವಾಚಿಸಿದರು. ಕ್ರೀಡೆ ಹಾಗೂ ಸಾಂಸ್ಕೃತಿ ಸ್ಪರ್ಧಾ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಫಾತಿಮಾ ಜುಮಾನ ಸ್ವಾಗತಿಸಿ, ಫಾತಿಮಾ ಸುಆದಾ ವಂದಿಸಿ, ಶಾಹಿನಾ ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

By suddi9

Leave a Reply

Your email address will not be published. Required fields are marked *