ಮಂಗಳೂರು : ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯು ಜನವರಿ 8 ರಂದು ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿವೆ. ಇದು ಭಾರತ್ ಬಂದ್ ಅಲ್ಲ ಎಂದು ಸಂಘಟನೆಗಳು ಸ್ಪಷ್ಟಪಡಿಸಿವೆ.

strike-agencies

 

ನಾಳೆ ದೇಶಾದ್ಯಂತ ಮುಷ್ಕರ ಮಾತ್ರ ನಡೆಯಲಿದ್ದು, ಬಸ್, ಆಟೋ, ಟ್ಯಾಕ್ಸಿ, ಸರಕು ಸಾಗಣೆ, ಬ್ಯಾಂಕಿಂಗ್ ಸೇವೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗುವುದಿಲ್ಲ, ಶಾಲೆ-ಕಾಲೇಜು, ಸರ್ಕಾರಿ ಕಚೇರಿಗಳು ಎಂದಿನಂತೆಯೇ ಕಾರ್ಯ ನಿರ್ವಹಿಸಲಿವೆ ಎಂದು ಸಂಘಟನೆಗಳು ತಿಳಿಸಿವೆ. ಎಲ್ಲ ಕಾರ್ಮಿಕರಿಗೆ ಕನಿಷ್ಠ 21 ಸಾವಿರ ರೂ. ವೇತನ ನಿಗದಿ ಸೇರಿದಂತೆ ಒಟ್ಟು 13 ಬೇಡಿಕೆಗಳನ್ನು ಕಾರ್ಮಿಕ ಸಂಘಟನೆಗಳು ಮುಂದಿಟ್ಟಿವೆ. ಆದರೆ, ಭಾರತ್ ಬಂದ್ ಗೆ ಕರೆ ಕೊಟ್ಟಿಲ್ಲ ಎಂದು ಕಾರ್ಮಿಕ ಸಂಘಟನೆಗಳು ಸ್ಪಷ್ಟಪಡಿಸಿವೆ.

By suddi9

Leave a Reply

Your email address will not be published. Required fields are marked *