ಬಂಟ್ವಾಳ : ಇಲ್ಲಿನ ಕೊಯಿಲ ಗ್ರಾಮದಲ್ಲಿ 4 ದಿನಗಳ ಹಿಂದೆ ನಿಲ್ಲಿಸಿದ್ದ ಟಿಪ್ಪರ್ ವಾಹನದಿಂದ ಬ್ಯಾಟರಿ ಕಳ್ಳತನವಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ಒರ್ವನನ್ನು ಬಂಧಿಸಲಾಗಿದೆ. ಮೂಡಬಿದ್ರೆಯ ಪುಚ್ಚಮುಗೇರು ನಿವಾಸಿ ಹರೀಶ್ ಪೂಜಾರಿ (40) ಬಂಧಿತ ಆರೋಪಿಯಾಗಿದ್ದಾನೆ. ಈತನಿಂದ ಕಳುವಾದ ಬ್ಯಾಟರಿ ಹಾಗೂ ಬೈಕನ್ನು ವಶಪಡಿಸಲಾಗಿದೆ.ಈ ಬೈಕನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಬಳಿ ಕಳವು ಮಾಡಿರುವುದಾಗಿ ತನಿಖೆಯ ವೇಳೆ ಒಪ್ಪಿಕೊಂಡಿದ್ದಾನೆಂದು ತಿಳಿದು ಬಂದಿದೆ.
ಆರೋಪಿತನು ಇನ್ನು ವಿವಿದೆಡೆಗಳಲ್ಲಿ ಬ್ಯಾಟರಿ ಕಳ್ಳತನ ವಿವಿಧ ವಾಹನಗಳ ಸುಮಾರು 18 ಬ್ಯಾಟರಿಯನ್ನು ಕಳವು ಮಾಡಿರುವುದು ಬೆಳಕಿಗೆ ಬಂದಿದ್ದು,ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ವೆಲೆಂಟೈನ್ ಡಿಸೋಜ ರವರ ಮಾರ್ಗದರ್ಶನದಲ್ಲಿ, ಬಂಟ್ವಾಳ ವೃತ ನಿರೀಕ್ಷಕ ರಾದ ಟಿ.ಡಿ ನಾಗರಾಜ್ ರವರ ನಿರ್ದೇಶನ ದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಪ್ರಸನ್ನ ಮತ್ತವರ ಸಿಬಂದಿಗಳು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

