ಬಂಟ್ವಾಳ: ಪೌರತ್ವ ತಿದ್ದುಪಡಿ ಕಾಯಿದೆ ದೇಶದ ಅಭಿವೃದ್ಧಿ ಮತ್ತು ಸಮಗ್ರತೆಗೆ ಪೂರಕವಾದ ಕಾಯ್ದೆಯಾಗಿರುವ ಹಿನ್ನಲೆಯಲ್ಲಿ ಜನತೆ ಬೆಂಬಲ ನೀಡಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ,ಸಂಸದ ನಳಿನ್ ಕುಮಾರ್ ಕಟೀಲ್ ಕರೆ ನೀಡಿದರು. ಶುಕ್ರವಾರ ಬಿ.ಸಿರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ನಡೆದ ರಾಷ್ಟ್ರ ಜಾಗರಣ ಸಮಿತಿ ನೇತೃತ್ವದಲ್ಲಿ ಪೌರತ್ವ ತಿದ್ದುಪಡಿ ಕಾಯಿದೆ ೨೦೧೯ ಸಮರ್ಥನಾ ಸಮಲೋಚನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಮಾತನಾಡಿ ಜ.೧೯ರಂದು ಮಂಗಳೂರು ಕುಳೂರಿನ ಗೋಲ್ಡ್ ಪಿಂಚ್ ಸಿಟಿ ಮೈದಾನದಲ್ಲಿ ಸಮರ್ಥನಾ ಸಭೆಗೆ ಬಂಟ್ವಾಳ ಕ್ಷೇತ್ರದಿಂದ ಸುಮಾರು ೨೫ ಸಾವಿರ ಮಂದಿ ಭಾಗವಹಿಸಲಿದ್ದಾರೆ ಎಂದರು.
ಸಭೆಯಲ್ಲಿ ರಾಷ್ಟೀಯ ಸ್ವಯಂ ಸೇವಕ ಸಂಘದ ವಿಭಾಗ ಸಂಪರ್ಕ ಪ್ರಮುಖ್ ರವೀಂದ್ರರವರು, ಅಭಿಯಾನ ಪ್ರಮುಖ್ ಸುಧೀರ್ ಶೆಟ್ಟಿ ಕಣ್ಣೂರು ಇವರು ಕಾಯ್ದೆಯ ಬಗ್ಗೆ ಮಾಹಿತಿ ನೀಡಿದರು. ಸಭೆಯಲ್ಲಿ ಮಾಜಿ ಶಾಸಕರುಗಳಾದ ರುಕ್ಮಯ ಪೂಜಾರಿ,ಪದ್ಮನಾಭ ಕೊಟ್ಟಾರಿ, ರಾಜ್ಯ ಬಿಜೆಪಿ ಸಹ ವಕ್ತಾರೆ ಸುಲೋಚನಾ ಜಿ.ಕೆ ಭಟ್, ಜಿಲ್ಲಾ ವಕ್ತಾರ ಹರಿಕೃಷ್ಣ ಬಂಟ್ವಾಳ, ಕ್ಷೇತ್ರ ಸಮಿತ ಅಧ್ಯಕ್ಷ ದೇವದಾಸ್ ಶೆಟ್ಟಿ ಉಪಸ್ಥಿತರಿದ್ದರು. ಪ್ರ.ಕಾರ್ಯದರ್ಶಿ ರಾಮದಾಸ್ ಬಂಟ್ವಾಳ ಸ್ವಾಗತಿಸಿ, ಉಪಾಧ್ಯಕ್ಷ ದೇವಪ್ಪ ಪೂಜಾರಿ ವಂದಿಸಿದರು. ಪ್ರ.ಕಾರ್ಯದರ್ಶಿ ಮೋನಪ್ಪ ದೇವಸ್ಯ ಕಾರ್ಯಕ್ರಮ ನಿರೂಪಿಸಿದರು.