ಬಂಟ್ವಾಳ: ಸಜೀಪಮೂಡ ಗ್ರಾಮ ಪಣೋಲಿಬೈಲು ಶ್ರೀ ಅಯ್ಯಪ್ಪಸ್ವಾಮಿ ಬಯಲಾಟ ಸೇವಾ ಸಮಿತಿಯ ಆಶ್ರಯದಲ್ಲಿ ಯಕ್ಷಗಾನ ಬಯಲಾಟದ ಬೆಳ್ಳಿಹಬ್ಬವನ್ನು ಆಚರಿಸಲಾಯಿತು. ಈ ಸಂಬಂಧ ನಡೆದ ಧಾರ್ಮಿಕ ಸಭೆಯಲ್ಲಿ ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠ ಶ್ರೀ ಮಧ್ವಾಚಾರ್ಯ ಸಂಸ್ಥಾನಂ ಸುಬ್ರಹ್ಮಣ್ಯದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನಗೈದರು.
ಸಭೆಯ ಅಧ್ಯಕ್ಷತೆಯನ್ನು ದ.ಕ. ಜಿ. ಪಂ. ಮಾಜಿ ಅಧ್ಯಕ್ಷ ಬಿ ಸದಾನಂದ ಪೂಂಜ ವಹಿಸಿದ್ದರು. ಪಾಣೆಮಂಗಳೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಜಯಶಂಕರ ಬಾಸ್ರಿತ್ತಾಯ, ಧಾರ್ಮಿಕ ಮುಂದಾಳು ಎಂ ಸುಬ್ರಹ್ಮಣ್ಯ ಭಟ್, ಸಜೀಪ ಗುತ್ತು ಗಡಿ ಪ್ರಧಾನವಾದ ಮುಂಡಪ್ಪ ಶೆಟ್ಟಿ ಯಾನೆ ಕೋಚು ಭಂಡಾರಿ ಉಪಸ್ಥಿತರಿದ್ದರು . ಇದೇ ವೇಳೆ 15ಮಂದಿ ಗಣ್ಯರನ್ನು ಸನ್ಮಾನಿಸಲಾಯಿತಲ್ಲದೆ ಬೆಳ್ಳಿಹಬ್