ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಮುತ್ತೂರು ಗ್ರಾಮದ ಶಾಂತಿಪಲ್ಕೆಯಿಂದ ಮೇಲಿನ ಬಾಳಿಕೆ ತನಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಧಿಯಿಂದ 25 ಲಕ್ಷ ರೂಪಾಯಿ ಅನುದಾನದಲ್ಲಿ ರಸ್ತೆ ಕಾಂಕ್ರೀಟಿಕರಣವನ್ನು ಮಂಗಳೂರು ನಗರ ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿಯವರು ಉದ್ಘಾಟಿಸಿದರು.
ಶಾಸಕರೊಂದಿಗೆ ತಾಲೂಕು ಪಂಚಾಯತ್ ಸದಸ್ಯ ನಾಗೇಶ್ ಶೆಟ್ಟಿ, ಮುತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ನಾಗಮ್ಮ, ಗ್ರಾಮ ಪಂಚಾಯತ್ ಸದಸ್ಯರಾದ ಸತೀಶ್ ಬಾಳ್ಳಾಜೆ, ಜಗದೀಶ್, ಪ್ರಮುಖರಾಗಿರುವ ಸಂತೋಷ್, ಜೆರಾಲ್ಡ್ ಲೋಬೋ ಸಹಿತ ಸ್ಥಳೀಯ ಮುಖಂಡರು, ಕಾರ್ಯಕರ್ತರು, ನಾಗರಿಕರು ಉಪಸ್ಥಿತರಿದ್ದರು.
