ಇಸ್ಲಾಮಾಬಾದ್ : ‘ಕಾಶ್ಮೀರ’ ವಿಷಯದಲ್ಲಿ ಪಾಕಿಸ್ತಾನ ಮತ್ತೊಮ್ಮೆ ತಗಾದೆ ತೆಗೆದಿದೆ. ಪ್ರಧಾನಿ ನರೇಂದ್ರ ಮೋದಿ ಅಮೆರಿಕಾ ಪ್ರವಾಸ ಯಶಸ್ವಿಯಾಗಿರುವ ಬೆನ್ನಲ್ಲೇ ಪಾಕಿಸ್ತಾನ, ಕಾಶ್ಮೀರ ವಿಷಯವನ್ನು ಪ್ರಸ್ತಾಪಿಸಿದ್ದು ಈ ಬಗ್ಗೆ ಜನಾಭಿಪ್ರಾಯ ಸಂಗ್ರಹಣೆ ಮಾಡಬೇಕೆಂದು ಹೇಳಿದ್ದಾರೆ.

ಕಾಶ್ಮೀರ ವಿಷಯವನ್ನು ಪ್ರಸ್ತಾಪಿಸಿರುವ ಪಾಕಿಸ್ತಾನ ವಿದೇಶಾಂಗ ಇಲಾಖೆ ವಕ್ತಾರೆ ತಸ್ಲೀಮ್ ಅಸ್ಲಮ್, ಕಾಶ್ಮೀರ ವಿಷಯವನ್ನು ಕಾನೂನಾತ್ಮಕ ವಿಷಯ ಎಂದು ಹೇಳಿದ್ದಾರೆ. ಅಲ್ಲದೇ ಉಭಯ ದೇಶಗಳ ನಡುವೆ ಇರುವ ವಿವಾದಕ್ಕೆ ಸಂಬಂಧಿಸಿದಂತೆ ಕಾಶ್ಮೀರದ ಜನತೆಯ ಅಭಿಪ್ರಾಯ ಸಂಗ್ರಹಣೆ ಮಾಡಬೇಕೆಂದು ಹೇಳಿದ್ದಾರೆ.

pak

ಕಾಶ್ಮೀರ ವಿವಾದದಲ್ಲಿ ಜನಾಭಿಪ್ರಾಯ ಸಂಗ್ರಹಣೆ ಮಾಡಬೇಕೆಂದು 6ದಶಕಗಳ ಹಿಂದೆ ವಿಶ್ವಸಂಸ್ಥೆ ಕೈಗೊಂಡ ನಿರ್ಣಯವನ್ನು ಪ್ರಸ್ತಾಪಿಸಿರುವ ಪಾಕಿಸ್ತಾನ ವಿದೇಶಾಂಗ ಇಲಾಖೆ ವಕ್ತಾರೆ, ಪಾಕಿಸ್ತಾನ ಹಾಗೂ ಭಾರತದ ನಡುವೆ ದ್ವಿಪಕ್ಷೀಯ ಮಾತುಕತೆ ಯು.ಎನ್ ನಿರ್ಣಯಕ್ಕೆ ಪರ್ಯಾಯವಾಗಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಕಾಶ್ಮೀರ ವಿಷಯಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿರುವ ಪಾಕಿಸ್ತಾನ ರಾಯಭಾರಿ ಪ್ರತ್ಯೇಕವಾದಿಗಳೊಂದಿಗೆ ಮಾತುಕತೆ ನಡೆಸಿದ್ದಕ್ಕಾಗಿ ಇತ್ತೀಚೆಗಷ್ಟೇ ಭಾರತ ಸರ್ಕಾರ ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಮಾತುಕತೆ ರದ್ದುಗೊಳಿಸಿತ್ತು. ಅದಾದ ನಂತರ ಪ್ರಧಾನಿ ನರೇಂದ್ರ ಮೋದಿ ಅಮೆರಿಕಾಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ, ವಿಶ್ವ ಸಂಸ್ಥೆ ಅಧಿವೇಶನದಲ್ಲಿ ಪಾಲ್ಗೊಂಡಿದ್ದ ಪಾಕ್ ಪ್ರಧಾನಿ ನವಾಜ್ ಷರೀಫ್ ಕಾಶ್ಮೀರ ವಿಷಯವನ್ನು ಪ್ರಸ್ತಾಪಿಸಿದ್ದರು.

By suddi9

Leave a Reply

Your email address will not be published. Required fields are marked *