ಕೈಕಂಬ:ಭಾರತೀಯ ಕೃಷಿ ಅನುಸಂಧಾನ ಪರಿಷತ್‍ನ ಅಂಗ ಸಂಸ್ಥೆಯಾದ ಕೃಷಿ ವಿಜ್ಞಾನ ಕೇಂದ್ರ, ದಕ್ಷಿಣ ಕನ್ನಡ ಹಾಗೂ ಇಂಡಿಯನ್ ಫಾರ್ಮರ್ಸ್ ಫರ್ಟಿಲೈಜರ್ಸ್ ಕೋ ಅಪರೇಟಿವ್ ಲಿ. ಮಂಗಳೂರು ಇವರುಗಳ ಸಂಯುಕ್ತ ಆಶ್ರಯದಲ್ಲಿ  ಫೆ.15 ರಂದು ಕೃಷಿ ವಿಜ್ಞಾನ ಕೇಂದ್ರದ ವಿಚಾರ ಸಂಕಿರಣ ಕೊಠಡಿಯಲ್ಲಿ ಒಂದು ವಾರದ ತಂತ್ರಜ್ಞಾನ ಸಪ್ತಾಹಕ್ಕೆ (ದಿನಾಂಕ 15-21 ಫೆಬ್ರವರಿ 2020 ರ ವರೆಗೆ) ಚಾಲನೆ ನೀಡಿ, ಈ ಕಾರ್ಯಕ್ರಮದಲ್ಲಿ ಕೃಷಿ ಪರಿಕರ ಮಾರಾಟಗಾರರಿಗೆ ಕೌಶಲ್ಯ ಅಭಿವೃದ್ಧಿ ಕುರಿತು ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೋಳ್ಳಲಾಗಿತ್ತು.

IMG20200215102044_1_ (1)ಡಾ. ಕೇದಾರನಾಥ್, ಸಸ್ಯ ಸಂರಕ್ಷಣೆಯ ವಿಜ್ಞಾನಿಯವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳನ್ನು ಸ್ವಾಗತಿಸಿದರು.ಅಧ್ಯಕ್ಷತೆ ವಹಿಸಿದ್ದ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರಾದ ಡಾ.ಟಿ.ಜೆ. ರಮೇಶ ರವರು ಮಾತನಾಡಿ, ಕೃಷಿಯಲ್ಲಿ ಸಮತೋಲನ ರಸಗೊಬ್ಬರಗಳ ಬಳಕೆ ಮತ್ತು ಆದುನಿಕ ತಂತ್ರಜ್ಞಾನಗಳ ಅಳವಡಿಕೆಯಿಂದ ರೈತರು ತಮ್ಮ ಆದಾಯವನ್ನು ಉತ್ತಮಗೊಳಿಸಬಹುದೆಂದು ತಿಳಿಸಿದರು.

IMG_20200215_111517ಈ ಕಾರ್ಯಕ್ರಮದಲ್ಲಿ ಇಂಡಿಯನ್ ಫಾರ್ಮರ್ಸ್ ಫರ್ಟಿಲೈಜರ್ಸ್ ಕೋ ಅಪರೇಟಿವ್ ಲಿ. ಮಂಗಳೂರಿನ ಕ್ಷೇತ್ರಾದಿಕಾರಿಗಳಾದ ಶ್ರೀ ಸಂಗಮೇಶ್ ಬಿರಾದಾರ ರವರು ಮುಖ್ಯ ಅತಿಥಿಗಳ ಭಾಷಣ ಮಾಡಿ ತಮ್ಮ ಸಂಸ್ಥೆಯ ಕಾರ್ಯಚಟುವಟಿಕೆಗಳ ಬಗ್ಗೆ ವಿವರಿಸಿ ಕೃಷಿಯಲ್ಲಿ ನೂತನ ಇಫ್ಕೋ ರಸಗೊಬ್ಬರಗಳ ಬಳಕೆಯ ಉಪಯುಕ್ತತೆ ಮತ್ತು ರಾಸಾಯನಿಕ ಗೊಬ್ಬರಗಳ ಮೇಲಿನ ಸಹಾಯಧನ ಬಳಕೆಯ ಕುರಿತು ಸವಿವರವಾಗಿ ತಿಳಿಸಿಕೊಟ್ಟರು. ಈ ಕಾರ್ಯಕ್ರಮದ ಜೊತೆಗೆ ಕೃಷಿ ಪರಿಕರ ಮಾರಾಟಗಾರರು-ಇಫ್ಕೋ ಕ್ಷೇತ್ರಾಧಿಕಾರಿ ಮತು ವಿಜ್ಞಾನಿಗಳ ಸಮ್ಮುಖದಲ್ಲಿ ಸಂವಾದವನ್ನು ನಡೆಸಲಾಯಿತು ಕೃಷಿ ಪರಿಕರ ಮಾರಾಟಗಾರರು ತಮ್ಮ ಸಮಸ್ಯೆಗಳಿಗೆ ವಿಜ್ಞಾನಿಗಳು ಹಾಗೂ ಇಫ್ಕೋ ಕ್ಷೇತ್ರಾಧಿಕಾರಿಗಳಿಂದ ವಿವಿಧ ಕ್ಷೇತ್ರ ಸಂಬಂಧಿತ ಸಮಸ್ಯೆಗಳಿಗೆ ಸಲಹೆ ಪಡೆದು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಈ ಕಾರ್ಯಕ್ರಮದಲ್ಲಿ ಡಾ. ಮಲ್ಲಿಕಾರ್ಜುನ್ ಎಲ್ ಮಣ್ಣು ವಿಜ್ಞಾನಿ, ಕೃಷಿ ಪರಿಕರ ಮಾರಾಟಗಾರರು ಮತ್ತು ಕೃಷಿ ವಿಜ್ಞಾನ ಕೇಂದ್ರದ ಸಿಬ್ಬಂದಿ ವರ್ಗದವರು ಭಾಗವಹಿಸಿದರು.

 

By Suddi9

Leave a Reply

Your email address will not be published. Required fields are marked *