ಬಂಟ್ವಾಳ: ಸಜೀಪ ಮುನ್ನೂರು ಗ್ರಾಮದ ನೇತ್ರಾವತಿ ನದಿ ಕಿನಾರೆಯಲ್ಲಿ ಅಕ್ರಮವಾಗಿ ಶೇಖರಿಸಿಟ್ಟಿದ್ದ ಮರಳನ್ನು ಕಂದಾಯ ಹಾಗೂ ಗಣಿ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಮುಟ್ಟುಗೋಲು ಹಾಕಿರುವ ಘಟನೆ ಶನಿವಾರ ರಾತ್ರಿನಡೆದಿದೆ.ಮರಳುಗಾರಿಕೆಯ ಧಕ್ಕೆಯ ಬಳಿ ಯಾವುದೇ ಬೋಟ್‌ಗಳು ಕಂಡು ಬಾರದಿದ್ದು, ಆದರೆ ಅಲ್ಲೇ ಸಮೀಪದ ಜಾಗದಲ್ಲಿ ಶೇಖರಿಸಿಟ್ಟಿದ್ದ ಸುಮಾರು 800 ಮೆಟ್ರಿಕ್ ಟನ್ ಮರಳು ಪತ್ತೆಯಾಗಿದ್ದು, ಅದನ್ನು ವಶಪಡಿಸಿಕೊಂಡು ಗಣಿ ಇಲಾಖೆಗೆ ಹಸ್ತಾಂತರಿಸಲಾಗಿದೆ. ಅವರು ದಾಖಲೆ ಪರಿಶೀಲಿಸಿ ಕ್ರಮ ಕೈಗೊಳ್ಳಲಿದ್ದಾರೆ ಎಂದು ಬಂಟ್ವಾಳ ತಹಶೀಲ್ದಾರ್ ರಶ್ಮಿ ಅವರು ತಿಳಿಸಿದ್ದಾರೆ.
