ಬಂಟ್ವಾಳ: ಪಾಣೆಮಂಗಳೂರು ಸಮೀಪದ  ಬೊಂಡಾಲ ಕೊಡಿ ಎಂಬಲ್ಲಿ ವಿದ್ಯುತ್ ಶಾಟ್೯ಸರ್ಕ್ಯೂಟ್ ನಿಂದ ಸಂಪೂರ್ಣ ಬೆಂಕಿಗಾಹುತಿಯಾದ ಕಮಲಶೆಟ್ಟಿಗಾರ್ ಅವರ ಮನೆಗೆ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಅವರು ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

IMG-20200223-WA0087ಶುಕ್ರವಾರ ಸಂಜೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆ ಭಸ್ಮವಾಗಿದ್ದರೆ,ಮನೆಸೊತ್ತುಗಳು ಕೂಡ ಬೆಂಕಿಯಿಂದ ಕರಟಿ ಹೋಗಿತ್ತು.ಪರಿಣಾಮ ಅಪಾರ ಪ್ರಮಾಣದ ನಷ್ಠ ಉಂಟಾಗಿತ್ತು. ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ತಹಶಿಲ್ದಾರರು  ಮತ್ತು ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.  ಈ ಸಂದರ್ಭದಲ್ಲಿ ಬಂಟ್ವಾಳ ಕ್ಷೇತ್ರ ಬಿಜೆಪಿಯ ನಿಕಟಪೂರ್ವ ಅಧ್ಯಕ್ಷರಾದ ಬಿ.ದೇವದಾಸ ಶೆಟ್ಟಿ, ಪುರಸಭೆಯ ಮಾಜಿ ಸದಸ್ಯ ಜನಾರ್ದನ ಬೊಂಡಾಲ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

IMG-20200223-WA0088

By Suddi9

Leave a Reply

Your email address will not be published. Required fields are marked *