ಶ್ರೀನಿವಾಸಪುರ: ತಾಲ್ಲೂಕಿನ ಶ್ರೀನಿವಾಸಪುರ ಹೊಗಳಗೆರೆ ರಸ್ತೆಯ ಸಮೀಪ ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಒಬ್ಬ ವ್ಯಕ್ತಿ ತೀತ್ರವಾಗಿ ಗಾಯಗೊಂಡಿದ್ದಾನೆ.
5svp1epಮೃತರನ್ನು ತಾಲ್ಲೂಕಿನ ಗಾಂಧಿನಗರ ಗ್ರಾಮದ ಯಶ್ವಂತ್‌ (20), ದೊಡ್ಡವೆಂಕಟೇಶಪ್ಪ (50), ಯಲ್ಲಪ್ಪ (18) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ತೀವ್ರವಾಗಿ  ಗಾಯಹೊಂಡಿರುವ ಮೋನಹ್‌ ಕುಮಾರ್‌ (23) ಅವರನ್ನು ಬೆಂಗಳೂರಿನ ನಿಮ್ಹಾನ್ಸ್‌ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.ಈ ನಾಲ್ವರು ಗುರುವಾರ ಬೆಳಿಗ್ಗೆ ಸುಮಾರು 5 ಗಂಟೆಯಲ್ಲಿ ಕಾರ್ಯನಿಮಿತ್ತ ಕೋಲಾರಕ್ಕೆ ಪಲ್ಸರ್‌ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ದುರ್ಘಟನೆ ಸಂಭವಿಸಿದೆ.  ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಾರ್ತಿಕ್‌ ರೆಡ್ಡಿ, ಹೆಚ್ಚುವರಿ ವರಿಷ್ಠಾಧಿಕಾರಿ ಜಾಹ್ನವಿ, ಡಿವೈಎಸ್‌ಪಿ ನಾರಾಯಣಸ್ವಾಮಿ, ಪೊಲೀಸ್ ಸರ್ಕಲ್‌ ಇನ್ಸ್‌ಪೆಕ್ಟರ್‌ ಎನ್‌.ಕೆ.ರಾಘವೇಂದ್ರ ಪ್ರಕಾಶ್, ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ವಿಠಲ್‌ ತಳವಾರ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

By suddi9

Leave a Reply

Your email address will not be published. Required fields are marked *