ಕೈಕಂಬ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ವತಿಯಿಂದ ನಡೆಯುವ ಸಪ್ತಪದಿ ಸರಳ ಸಾಮೂಹಿಕ ವಿವಾಹದ ಸಪ್ತಪದಿ ರಥದ ಚಾಲನೆಯು ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ವಠಾರದಲ್ಲಿ ಮಾ.7ರಂದು ಶನಿವಾರ ನಡೆಯಿತು.DSC_0605

ಕರ್ನಾಟಕ ಸರಕಾರದ ಹಿಂದೂ ಧಾರ್ಮಿಕ ಸಂಸ್ಥೆಗಳ ಧರ್ಮದಾಯ ಧತ್ತಿ ಇಲಾಖೆ ವತಿಯಿಂದ ನಡೆಯುವ ಸಾಮೂಹಿಕ ವಿವಾಹದ ಸಪ್ತಪದಿ ರಥಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಚಾಲನೆ ನೀಡಿದರು.7vp 1

ಈ ಸಂದರ್ಭದಲ್ಲಿ ದೇವಳದ ಅರ್ಚಕರಾದ ಮಾಧವ ಭಟ್, ನಾರಾಯಣ ಭಟ್, ಕೆ.ರಾಮ್ ಭಟ್ ಆಡಳಿತ ಮೊಕ್ತೇಸರ ಅಮ್ಮುಂಜೆಗುತ್ತುಡಾ.ಮಂಜಯ್ಯ ಶೆಟ್ಟಿ, ಚೇರ ಸೂರ್ಯನಾರಾಯಣ ರಾವ್, ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಮತ್ತಿತರರು ಉಪಸ್ಥಿತರಿದ್ದರು.7vpsaptapadi ratha

By suddi9

Leave a Reply

Your email address will not be published. Required fields are marked *