ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್  ವಿಟ್ಲ ಹಾಗೂ ಜಿಲ್ಲಾ ಮಹಿಳಾ ಮಂಡಲ ಒಕ್ಕೂಟ ಮಂಗಳೂರು ತಾಲೂಕು, ಮಹಿಳಾ ಮಂಡಲ ಬಂಟ್ವಾಳ ಇದರ ಜಂಟಿ ಆಶ್ರಯದಲ್ಲಿ ಕಲ್ಲಡ್ಕ ಜಾನ್ಸಿ ಮಹಿಳಾ ಮಂಡಲ ಮತ್ತು ಜ್ಞಾನ ವಿಕಾಸ ಕೇಂದ್ರದ ವತಿಯಿಂದ  ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಕಲ್ಲಡ್ಕ ನೇತಾಜಿ ಯುವಕ ಮಂಡಲ ಸಭಾಂಗಣದಲ್ಲಿ ನಡೆಯಿತು.
IMG-20200312-WA0000
ಜಾನ್ಸಿ ಮಹಿಳಾ ಮಂಡಲದ ಅಧ್ಯಕ್ಷೆ  ಮೀನಾಕ್ಷಿ ಆರ್. ಪೂಜಾರಿ ಇವರ ಅಧ್ಯಕ್ಷತೆ ವಹಿಸಿದ್ದರು.  ಮಂಡಲದ ಗೌರವ ಅಧ್ಯಕ್ಷೆ  ಡಾ. ಕಮಲಾ ಪ್ರಭಾಕರ ಭಟ್   ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ,ಸಮಾಜದ ಪರಿವರ್ತನೆಯಲ್ಲಿ ಮಹಿಳೆಯರ ಪಾತ್ರದ ಬಗ್ಗೆ ಬೆಳಕು ಚೆಲ್ಲಿದರು .ಈ ಸಂದರ್ಭದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪಡೆದ ಹರಿಣಿ ಸದಾಶಿವ ಹಾಗೂ ಕಮಲಾ ನಾಯ್ಕ  ಕುಂಟಿಪಾಪು ಇವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ತಾಲೂಕು ಮಹಿಳಾ ಮಂಡಲದ ಅಧ್ಯಕ್ಷೆ  ಮೀನಾಕ್ಷಿ ರಾವ್, ವಿಟ್ಲ ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಜಯ ರೈ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಯ ನಿವೃತ್ತ ಅಧಿಕಾರಿ ಸರಸ್ವತಿ ಉಪಸ್ಥಿತರಿದ್ದರು.ಜಾನ್ಸಿ ಮಹಿಳಾ ಮಂಡಲ ಸದಸ್ಯೆ ಶ್ರೀಲತಾ ಸ್ವಾಗತಿಸಿ, ಸೇವಾಪ್ರತಿನಿಧಿ  ಮಾಲತಿ ನೆಟ್ಲ ವಂದಿಸಿದರು. ಜ್ಞಾನವಿಕಾಸ ಕೇಂದ್ರದ ಸಮನ್ವಯಾಧಿಕಾರಿ  ನಳಿನಾಕ್ಷಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

 

By suddi9

Leave a Reply

Your email address will not be published. Required fields are marked *