ಕುಪ್ಪೆಪದವು: ಮುತ್ತೂರು ಪಂಚಾಯತ್ ವ್ಯಾಪ್ತಿಯ ಶಾಂತಿಪಲ್ಕೆ, ಚಂದ್ರಮಜಲ್ ರಸ್ತೆ ಹಾಗೂ ಕೆಳಗಿನಮನೆ ರಸ್ತೆಗಳಿಗೆ ಮಂಜೂರಾಗಿರುವ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ನಡೆಯಲಿರುವ ಕಾಂಕ್ರಿಟ್ಕರಣಕ್ಕೆ ಜಿಲ್ಲಾ ಪಂಚಾಯತ್ ಸದಸ್ಯ ಜನಾರ್ದನ ಗೌಡ ಮುಚ್ಚುರು ಹಾಗೂ ತಾಲೂಕು ಪಂಚಾಯತ್ ಸದಸ್ಯ ನಾಗೇಶ್ ಶೆಟ್ಟಿ ಅವರು ಗುದ್ದಲಿ ಪೂಜೆ ನೆರವೇರಿಸಿದರು.


