ಮಂಗಳೂರು : ಕುತ್ತಾರು ನಿತ್ಯಾನಂದನಗರದಲ್ಲಿ ವೈನ್ಸ್ ಸಾಪ್ ಅಂಗಡಿಗೆ ನುಗ್ಗಿದ ಕಳ್ಳರು ಸುಮಾರು 1ಲಕ್ಷಕಿಂತ ಹೆಚ್ಚು ಮೌಲ್ಯದ ಮದ್ಯವನ್ನು ಕಳವು ಗೈದ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಪುರುಷೋತ್ತಮ್ ಪಿಲಾರ್ ಅವರಿಗೆ ಸೇರಿದ ವೈನ್ಸ್ ಅಂಗಡಿಯ ಶಟರ್ ಮುರಿದು ಒಳನುಗ್ಗಿದ ಕಳ್ಳರು ಅಧಿಕ ಬೆಲೆಯ ಮದ್ಯದ ಬಾಟಲಿಗಳನ್ನು ತೆಗೆದುಕೊಂಡು ಹೋಗಿದ್ದಾರೆ ಬಹಳ ನಾಜೂಕಾಗಿ ಕಳ್ಳರು ಯಾರಿಗೂ ಕಾಣಿಸದಂತೆ ಅಂಗಡಿ ಎದುರು ಬಟ್ಟೆಯನ್ನು ಕಟ್ಟಿ ಶಟರ್ ಬಾಗಿಲನ್ನು ಮುರಿದಿದ್ದಾರೆ.
ಕೊಣಾಜೆ ಪೊಲೀಸ್ ಠಣೆಯಲ್ಲಿ ಪ್ರಕರಣ ದಾಖಲಾಗಿದೆ.
ವೈನ್ಸ್ ಅಂಗಡಿ ಸಮೀಪದಲ್ಲೇ ಇರುವ ಪಾನ್ ಅಂಗಡಿಯಿಂದ 10 ಪ್ಯಾಕೆಟ್ ಸಿಗರೇಟುಗಳನ್ನು ಕಳ್ಳರು ಕಳವುಗೈದಿದ್ದಾರೆ. ಮೂರು ವರ್ಷದಲ್ಲಿ 10ನೇ ಬಾರಿ ಇದೇ ರೀತಿಯಲ್ಲಿ ಕಳವು ನಡೆಯುತ್ತಿದೆ ಎಂದು ಪಾನ್ ವಾಲಾ ಪೊಲೀಸರಲ್ಲಿ ಹೇಳಿಕೊಂಡಿದ್ದಾನೆ.
