ಬಂಟ್ವಾಳ: ಭಾರತೀಯ ಜನತಾ ಪಾರ್ಟಿಯ ಬಿ.ಸಿ.ರೋಡ್ ಕಚೇರಿಯಲ್ಲಿ ಬಂಟ್ವಾಳ ಕ್ಷೇತ್ರ ಬಿಜೆಪಿ ವತಿಯಿಂದತ ಪಕ್ಷದ ಧ್ವಜ ಹಾರಿಸುವ ಮೂಲಕ ಬಿಜೆಪಿ ಸಂಸ್ಥಾಪನಾ ದಿನಾಚರಣೆಯನ್ನು ಸೋಮವಾರಸರಳವಾಗಿ ಆಚರಿಸಲಾಯಿತು.

ಪಕ್ಷದ ಅಧ್ಯಕ್ಷರಾದ ದೇವಪ್ಪ ಪೂಜಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಜಿಲ್ಲಾ ಯುವ ಮೋರ್ಚ ಅಧ್ಯಕ್ಷ ಸಂದೇಶ್ ಶೆಟ್ಟಿ, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ,ಮೋನಪ್ಪ ದೇವಸ್ಯ, ಕ್ಷೇತ್ರ ಯುವ ಮೋರ್ಚ ಅಧ್ಯಕ್ಷ ಪ್ರದೀಪ್ ಅಜ್ಜಿಬೆಟ್ಟು, ಪ್ರಮುಖರಾದ ವಜ್ರನಾಥ ಕಲ್ಲಡ್ಕ,ಸುದರ್ಶನ ಬಜ, ಗಣೇಶ್ ರೈ ಮಾಣಿ, ಪ್ರಮೋದ್ ಅಜ್ಜಿಬೆಟ್ಟು,ಪ್ರಣಾಮ್,ಬಾಸ್ಕರ ಟೈಲರ್ ಹಾಗೂ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.
