ಬಂಟ್ವಾಳ :ಶಾಸಕ ರಾಜೇಶ್ ನಾಯ್ಕ್  ಉಳಿಪ್ಪಾಡಿಗುತ್ತು ಅವರು ಸೋಮವಾರ ಬಂಟ್ವಾಳ ಕ್ಷೇತ್ರದ ಮಾಣಿ, ಬರಿಮಾರು ಹಾಗೂ ಪೆರಾಜೆ ಗ್ರಾಮ ಪಂಚಾಯತ್‌ಗಳಲ್ಲಿ ಕೊರೊನಾ-೧೯ ತಡೆಗಾಗಿ ರಚನೆಗೊಂಡಿರುವ ಟಾಸ್ಕ್ ಪೋರ್ಸ್ ಸಮಿತಿಗಳ ಸದಸ್ಯರ ಸಭೆ ನಡೆಸಿದರು.IMG-20200413-WA0033
ಸಭೆಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಂದ ಆಯಾಯ ಪಂಚಾಯತ್‌ಗಳಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ಪಡೆದರು. ಆಶಾ ಕಾರ್ಯಕರ್ತೆಯರು ಮನೆ ಭೇಟಿ ವೇಳೆ ತೊಂದರೆ ಅನುಭವಿಸುತ್ತಿದ್ದಾರೆಯೇ ಎಂದು ವಿಚಾರಿಸಿದರು. ನ್ಯಾಯ ಬೆಲೆ ಅಂಗಡಿಗಳಲ್ಲಿ ಸಮರ್ಪಕ ಅಕ್ಕಿ ವಿತರಣೆಗೆ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.IMG-20200413-WA0032
ಸಭೆಯಲ್ಲಿ ಜಿ.ಪಂ.ಸದಸ್ಯರಾದ ಮಂಜುಳಾ ಮಾವೆ, ಕಮಲಾಕ್ಷಿ ಪೂಜಾರಿ, ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಕಾರ್ಯನಿರ್ವಹಣಾಽಕಾರಿ ರಾಜಣ್ಣ, ಬರಿಮಾರು ಗ್ರಾ.ಪಂ.ಅಧ್ಯಕ್ಷ ವಸಂತ, ಮಾಣಿ ಗ್ರಾ.ಪಂ.ಅಧ್ಯಕ್ಷೆ ಮಮತಾ ಎಸ್.ಶೆಟ್ಟಿ, ಪೆರಾಜೆ ಗ್ರಾ.ಪಂ.ಅಧ್ಯಕ್ಷೆ ಪುಷ್ಪಾ, ಗ್ರಾ.ಪಂ.ಉಪಾಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಅಧಿಕಾರಿಗಳು ಮೊದಲಾದವರು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *