ಬೆಳ್ತಂಗಡಿ:ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ತಾಲೂಕು ಆಡಳಿತ, ತಾಲೂಕು ಪಂಚಾಯತ್, ನಗರ ಪಂಚಾಯತ್, ತಾಲೂಕು ಸಮಾಜ ಕಲ್ಯಾಣ ಇಲಾಖೆ ಬೆಳ್ತಂಗಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಅ. 8 ರಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಮಹರ್ಷಿ ವಾಲ್ಮೀಕಿಯರ ಜಯಂತಿ ಆಚರಣೆ ನಡೆಯಲಿದೆ.
ದಿನಾಚರಣೆಯ ಶಾಸಕ ಕೆ. ವಸಂತ ಬಂಗೇರ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ತಾ.ಪಂ.ಅಧ್ಯಕ್ಷೆ ಜಯಂತಿ ಪಾಲೇದು ವಹಿಸಲಿದ್ದಾರೆ. ಶಿಕ್ಷಕ ದೇವದಾಸ್ ನಾಯಕ್ ಮುಖ್ಯ ಭಾಷಣ ಮಾಡಲಿದ್ದಾರೆ. ಜನಪ್ರತಿನಿಧಿಗಳು, ಅಧಿಕಾರಿ ವರ್ಗದವರು ಉಪಸ್ಥಿತರಿರುತ್ತಾರೆ ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.
