ಬಂಟ್ವಾಳ:ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತೀ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಎಲ್ಲಾ ವರ್ಗದ ಅರ್ಹ 3,700ಕ್ಕೂ ಮಿಕ್ಕಿ ಬಡ ಕುಟುಂಬಗಳನ್ನು ಗುರುತಿಸಿ ಕಾಂಗ್ರೆಸ್ ಪಕ್ಷ
ಮತ್ತು ದಾನಿಗಳ ನೆರವಿನಿಂದ ಉಚಿತ ಅಕ್ಕಿ ಮತ್ತು ದಿನಸಿ ಸಾಮಾಗ್ರಿ ಕಿಟ್ ವಿತರಿಸಲಾಗಿದೆ. ಕಾಂಗ್ರೆಸ್ಸಿನ ಕೆಲವೊಂದು ಗ್ರಾಮ ಸಭೆ ಮತ್ತು ಪುರಸಭಾ ಸದಸ್ಯರು ರಮ್ಜಾನ್ ಹಬ್ಬದ ಸಂದರ್ಭದಲ್ಲಿ ಕಿಟ್ ವಿತರಿಸಲು ಚಿಂತನೆ ನಡೆಸಿದ್ದಾರೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ಇಲ್ಲಿನ ರಾಯಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 35ಕ್ಕೂ ಮಿಕ್ಕಿ ಮಂದಿ ಆಶಾ ಕಾರ್ಯಕರ್ತೆಯರಿಗೆ ಭಾನುವಾರ ಉಚಿತ ಅಕ್ಕಿ ಮತ್ತು ದಿನಸಿ ಸಾಮಾಗ್ರಿ ಕಿಟ್ ವಿತರಿಸಿ ಅವರು ಮಾತನಾಡಿದರು.
ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬೇಬಿ ಕುಂದರ್, ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಪದ್ಮಶೇಖರ ಜೈನ್, ತಾ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ವಿ.ಶೆಟ್ಟಿ, ಸದಸ್ಯೆ ಮಂಜುಳಾ ಸದಾನಂದ, ಕುಕ್ಕಿಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ ಸುಂದರ ಶಾಂತಿ, ಚೆನ್ನೈತ್ತೋಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಯತೀಶ ಶೆಟ್ಟಿ, ಮಾಜಿ ಅಧ್ಯಕ್ಷ ನವೀನಚಂದ್ರ ಶೆಟ್ಟಿ, ಸದಸ್ಯರಾದ ಶೋಭಾ ಎನ್.ಸಪಲ್ಯ, ಸುರೇಶ ಜೋರ, ಪ್ರಮುಖರಾದ ಜಗದೀಶ ಕೊಯಿಲ, ಸುಧೀರ್ ಕುಮಾರ್ ಶೆಟ್ಟಿ, ದೇವಪ್ಪ ಕರ್ಕೇರ, ಸುರೇಶ ಶೆಟ್ಟಿ ಕುತ್ಲೋಡಿ, ಸತೀಶ ಕೊಯಿಲ, ಕೆ.ಪಿ.ಲೋಬೋ, ಅಶೋಕ ಆಚಾರ್ಯ, ದಿನೇಶ ಶೆಟ್ಟಿಗಾರ್ ಮತ್ತಿತರರು ಇದ್ದರು.
