ಬಂಟ್ವಾಳ: ಇಲ್ಲಿನ ಬೈಪಾಸು ಬಳಿ ರಸ್ತೆ ಕಾಮಗಾರಿ ನಡೆಯುವ ಸಂದರ್ಭ ಸ್ಥಳೀಯರಿಗೆ ಯಾವುದೇ ತೊಂದರೆಯಾಗದಂತೆ ನಿರ್ವಹಿಸುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಬಿ.ಸಿ.ರೋಡ್ ನಿಂದ ಪುಂಜಾಲಕಟ್ಟೆ ವರೆಗಿನ ಚತುಷ್ಪಥ ರಸ್ತೆ ಕಾಮಗಾರಿ ಮತ್ತೆ ಭರದಿಂದ ಸಾಗುತ್ತಿದ್ದು,ಈ ವೇಳೆ ಬಿ.ಸಿ.ರೋಡು ಮತ್ತು ಪಾಣೆಮಂಗಳೂರಿಗೆ ನೀರು ಸರಬರಾಜು ಮಾಡುವ ಮುಖ್ಯ ಕೊಳವೆಯು ಹಾನಿಯಾಗಿದ್ದು, ದುರಸ್ತಿ ಕಾರ್ಯ ನಡೆಯುತ್ತಿದ್ದು ಶುಕ್ರವಾರ ಸ್ಥಳಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳ್ಳಿಪ್ಪಾಡಿ ಭೇಟಿ ನೀಡಿ ಪರಿಶೀಲಿಸಿದರು. ಕೊಳವೆಯನ್ನು ಶೀಘ್ರ ದುರಸ್ತಿಗೊಳಿಸಿ ನೀರು ಸರಬರಾಜು ವ್ಯವಸ್ಥೆ ಗೊಳಿಸುವಂತೆ ಸೂಚಿಸಿದರಲ್ಲದೆ ಈ ಪ್ರದೇಶದಲ್ಲಿ ತಡೆಗೋಡೆ ಹಾಗೂ ಚರಂಡಿ ಕಾಮಗಾರಿ ನಡೆಸಿ ಸ್ಥಳೀಯರಿಗೆ ತೊಂದರೆಯಾಗದ ರೀತಿ ರಸ್ತೆ ಕಾಮಗಾರಿ ನಡೆಸುವಂತೆ ಸೂಚಿಸಿದರು.

ಈ ಸಂಧರ್ಭ ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ , ಸ್ಥಳೀಯ ಪುರಸಭಾ ಸದಸ್ಯ ಹರಿಪ್ರಸಾದ್, ಬೂಡ ಸದಸ್ಯ ಬಾಸ್ಕರ ಟೈಲರ್, ಅರ್ಕಮೆ ನರಸಿಂಹ ಮಯ್ಯ, ಸ್ಥಳೀಯರು ರಸ್ತೆ ಕಾಮಗಾರಿ ಮೇಲ್ವಿಚಾರಕರು ಉಪಸ್ಥಿತರಿದ್ದರು.
