ಬಂಟ್ವಾಳ: ವಿದ್ಯುತ್ ಬಿಲ್ ಸಂಬಂಧಿಸಿ ಮೆಸ್ಕಾಂ ಅನುಸರಿಸುತ್ತಿರುವ ನೀತಿಗೆ ಮಾಜಿ ಸಚಿವ ಬಿ.ರಮಾನಾಥ ರೈ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದನ್ನು ತಕ್ಷಣ ರದ್ದುಗೊಳಿಸಿ, ಕ್ರಮ ಕೈಗೊಳ್ಳಬೇಕು ಎಂದು ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿರುವ ಅವರು, ಸರಿಪಡಿಸದೇ ಇದ್ದಲ್ಲಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.
IMG-20200508-WA0053 (1)
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಕೊರೊನಾ ವೈರಸ್ ನಿಂದ ತತ್ತರಿಸಿ ಲಾಕ್ ಡೌನ್ ಆದೇಶ ಜಾರಿಯಾದ ದಿನದಿಂದ ಸಾರ್ವಜನಿಕರು ತಮ್ಮ 2 ತಿಂಗಳ ಗೃಹವಿದ್ಯುತ್ ಬಿಲ್ ಮನ್ನಾ ಮಾಡುವಂತೆ ತಿಳಿಸಿದ್ದರು. ಆದರೆ ಮೆಸ್ಕಾಂ ಇಲಾಖೆಯವರು ಮನೆಗಳ ವಿದ್ಯುತ್ ಬಿಲ್ಲಿನಲ್ಲಿ 3 ತಿಂಗಳ ಬಿಲ್ಲನ್ನು ಒಟ್ಟಿಗೆ ಸೇರಿಸಿ ಪಾವತಿಸುವಂತೆ ಒತ್ತಾಯಿಸುತ್ತಿರುವುದು ಗೃಹಬಳಕೆದಾರರಿಗೆ ಇದು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ರೈ ಹೇಳಿದ್ದಾರೆ.

By suddi9

Leave a Reply

Your email address will not be published. Required fields are marked *