ಮೂಡುಶೆಡ್ಡೆ : ಮೂಡುಶೆಡ್ಡೆಯ ಸಂಜೀವಿನಿ ಸೇವಾ ಬಳಗ ಇದರ ವತಿಯಿಂದ ಮೂಡುಶೆಡ್ಡೆ ಗ್ರಾಮದ 150ಕ್ಕೂ ಅಧಿಕ ಆಟೋರಿಕ್ಷಾ ಚಾಲಕರು, ಆಶಾ ಕಾರ್ಯಕರ್ತೆಯರು ಹಾಗೂ ವೈದ್ಯಕೀಯ ಸಿಬ್ಬಂದಿಗೆ ಸಂಜೀವಿನಿ ಸೇವಾ ಕೇಂದ್ರದ ಬಳಿ ಮೂಲ್ಕಿ-ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಅಕ್ಕಿ ಹಾಗೂ ದಿನಸಿ ಸಾಮಗ್ರಿ ಕಿಟ್ ವಿತರಿಸಿದರು.
ಈ ಸಂದರ್ಭದಲ್ಲಿ ಮೂಡುಶೆಡ್ಡೆ ಗ್ರಾಮ ಪಂಚಾಯತ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ, ಕೃಷಿಕ ರಮಾನಾಥ ಅತ್ತರ್(ಚಿತ್ತಣ್ಣ), ಸದಸ್ಯರು, ಕಾರ್ಯಕರ್ತರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.


