ಬಂಟ್ವಾಳ: ದಡ್ಡಲಕಾಡು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಪೋಷಕರ ವಿಶೇಷ ಸಭೆ ಸೋಮವಾರ ಶಾಲೆಯ ಸಭಾಂಗಣದಲ್ಲಿ ನಡೆಯಿತು. ಸರ್ಕಾರದ ಪ್ರಸ್ತುತ ಆದೇಶ ಹಾಗೂ ಶಾಲೆ ಪುನಾರಂಭಿಸುವ ಬಗ್ಗೆ ಪೋಷಕರೊಂದಿಗೆ ಚರ್ಚೆ ನಡೆಸಲಾಯಿತು. ಶಾಲೆ ದತ್ತು ಸಂಸ್ಥೆ ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ಪ್ರಕಾಶ್ ಅಂಚನ್ ಮಾತನಾಡಿ ಗ್ರಾಮೀಣ ಭಾಗದ ಪೋಷಕರು ಆನ್ಲೈನ್ ಶಿಕ್ಷಣ ವ್ಯವಸ್ಥೆಗೆ ವಿರೋಧ ವ್ಯಕ್ತಪಡಿಸಿದ್ದು ಶಿಕ್ಷಣ ಇಲಾಖೆ ಇದನ್ನು ಜಾರಿಗೊಳಿಸಲು ಮುಂದಾದಲ್ಲಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು. ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಎರಡು ತಿಂಗಳ ಬಳಿಕವೇ ಶಾಲಾ ಪುನಾರಂಭಿಸಲು ಸರಕಾರವನ್ನು ಒತ್ತಾಯಿಸುವುದಾಗಿ ತಿಳಿಸಿದರು. ಲಾಕ್ಡೌನ್ ಅವಧಿಯಲ್ಲೂ ಶಾಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿದ್ದು ಪೋಷಕರು ಸಹಕಾರ ನೀಡವಂತೆ ವಿನಂತಿಸಿದರು.
ವಿದ್ಯಾರ್ಥಿಗಳ ಪೋಷಕರು ಮಾತನಾಡಿ ಇಡೀ ದಿನ ವಿದ್ಯಾರ್ಥಿಗಳು ಮಾಸ್ಕ್ ಕಟ್ಟಿಕೊಂಡು ತರಗತಿಯಲ್ಲಿ ಇರಲು ಸಾಧ್ಯವಿಲ್ಲ, ಇದರಿಂದ ಆಮ್ಲಜನಕದ ಕೊರತೆ ಉಂಟಾಗಲಿದೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಅನಿವಾರ್ಯತೆ ಇರುವುದರಿಂದ ಶಾಲೆಗಳಲ್ಲಿ ಒಂದು ಬೆಂಚಿನಲ್ಲಿ ಇಬ್ಬರು ಮಕ್ಕಳನ್ನು ಮಾತ್ರ ಕೂರಿಸಲು ಅಸಾಧ್ಯ ಆದ್ದರಿಂದ ಆಗಸ್ಟ್ ಬಳಿಕವೇ ಶಾಲೆ ಆರಂಭ ಉತ್ತಮ ಎನ್ನುವ ಸಲಹೆಗಳನ್ನು ನೀಡಿದರು. ಆಗಸ್ಟ್ ತಿಂಗಳಿನಲ್ಲಿ ಮತ್ತೊಮ್ಮೆ ಪೋಷಕರ ಸಭೆ ಕರೆದು ಆಗಿನ ಪರಿಸ್ಥಿತಿಗೆ ಅನುಗುಣವಾಗಿ ಶಾಲೆ ಆರಂಭಿಸುವ ಬಗ್ಗೆ ತೀರ್ಮಾನಿಸಲಾಯಿತು.
ಶಾಲೆ ಮುಖ್ಯೋಪಾಧ್ಯಾಯ ಮೌರೀಸ್ ಡಿಸೋಜಾ , ಸಹಶಿಕ್ಷಕಿ ಹಿಲ್ಡಾ ಫೆರ್ನಾಂಡೀಸ್, ಪ್ರೌಢಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಅನಿತಾ ಪೂರಕ ಮಾಹಿತಿ ನೀಡಿದರು. ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ರಾಮಚಂದ್ರ ಪೂಜಾರಿ ಕರೆಂಕಿ, ಉಪಾಧ್ಯಕ್ಷ ಉಮೇಶ್, ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ಸದಸ್ಯ ನವೀನ್ ಸೇಸಗುರಿ ಉಪಸ್ಥಿತರಿದ್ದರು. ಪುರುಷೋತ್ತಮ ಅಂಚನ್ ವಂದಿಸಿದರು.