ಬಂಟ್ವಾಳ: ಕೊರೋನ ಮಹಾಮಾರಿಯ ಸಂದಿಗ್ದಪರಿಸ್ಥಿತಿಯ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಶಿಕ್ಷಣ ಸಾಲದ ಬಡ್ಡಿಯ ಮನ್ನಾ ಹಾಗೂ ಶಿಕ್ಷಣ ಸಾಲದ ಮರುಪಾವತಿ ಅವಧಿಯನ್ನು ಮುಂದೂಡುವಂತೆ ವಿಜಯಬ್ಯಾಂಕಿನ ನಿವೃತ್ತ ಉದ್ಯೋಗಿ,ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಅವರು ರಾಜ್ಯದ ಮುಖ್ಯಮಂತ್ರಿ ಬಿಎಸ್ ವೈ ಸಹಿತ ಕೇಂದ್ರಹಣಕಾಸು ಸಚಿವೆ ನಿರ್ಮಲಾ ಸೀತಾತಾಮ್ ಅವರನ್ನು ಪತ್ರದ ಮೂಲಕ ಒತ್ತಾಯಿಸಿದ್ದಾರೆ. ಕೊರೋನಾ ಮಹಾಮಾರಿಯಿಂದಾಗಿ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ಜನರು ದೈನಂದಿನ ಜೀವನ ನಡೆಸಲು ಸಂಕಷ್ಟಪಡುವಂತಾಗಿದೆ.ಮುಖ್ಯವಾಗಿ ವಿದ್ಯಾರ್ಥಿಗಳು ರಾಷ್ಟ್ರೀಕೃತ ಬ್ಯಾಂಕ್ ನಿಂದ ಶಿಕ್ಷಣ ಸಾಲ ಪಡೆದು ವಿದ್ಯಾಭ್ಯಾಸ ಮಾಡುತ್ತಿದ್ದು,ಅನೇಕ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮುಗಿಸಿ ಉದ್ಯೋಗಕ್ಕಾಗಿ ಅಲೆದಾಡುತ್ತಿದ್ದಾರೆ.ವಿದ್ಯಾರ್ಥಿಗಳ ಹೆತ್ತವರು,ಪೋಷಕರಿಗೆ ಯಾವುದೇ ರೀತಿಯ ಆದಾಯವಿಲ್ಲದೆ ಆರ್ಥಿಕ ಪರಿಸ್ಥಿತಯಿಂದ ಕಂಗೆಟ್ಟಿದ್ದಾರೆ.ಮಕ್ಕಳ ವಿದ್ಯಾಭ್ಯಾಸದ ಸಾಲವನ್ನು ತೀರಿಸಲಾಗದೆ ಚಿಂತೆಗೀಡಾಗಿದ್ದಾರೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ. ಇಂತಹ ಸಂದಿಗ್ದ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಕೇಂದ್ರ ಸರಕಾರವು ಕನಿಷ್ಠ ಒಂದುವರ್ಷದ(ಮಾ.2020-ಎಪ್ರಿಲ್2021)
