ಬಂಟ್ವಾಳ: ಶಂಭೂರು ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಪುನರಾರಂಭದ ಬಗ್ಗೆ ಪೋಷಕರ ಅಭಿಪ್ರಾಯ ಸಂಗ್ರಹಿಸುವ ಸಮಾಲೋಚನಾ ಸಭೆ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಬೊಂಡಾಲ ಸಚ್ಚಿದಾನಂದ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜರಗಿತು.
IMG-20200613-WA0014ಮುಖ್ಯಶಿಕ್ಷಕರು ಸರಕಾರಿ ನಿಯಮದಂತೆ ಪೋಷಕರ ಅಭಿಪ್ರಾಯ ಸಂಗ್ರಹಿಸಲಾಗುತ್ತಿದ್ದು ನಮ್ಮ ಅಭಿಪ್ರಾಯ ಕ್ರೋಡೀಕರಿಸಿ ಇಲಾಖೆಗೆ ಸಲ್ಲಿಸಲಾಗುವುದು ಎಂದರು. ಕರೋನಾ ಸಂಪೂರ್ಣ ಹತೋಟಿ ಬಂದ ನಂತರವೇ  ದಿನ ಬಿಟ್ಟು ದಿನ ತರಗತಿ ನಡೆಸುವ ಮೂಲಕ ಶಾಲಾರಂಭ ಸೂಕ್ತ ಎಂಬ ಅಭಿಪ್ರಾಯ ಪೋಷಕರಿಂದ ವ್ಯಕ್ತ ವಾಗಿದ್ದು ಅದನ್ನು ಶಾಲಾಭಿವೃದ್ಧಿ ಸಮಿತಿ ಸಭೆಯಲ್ಲಿ ಅಂಗೀಕರಿಸಲಾಯಿತು.ಸಭೆಯಲ್ಲಿ ಸಮೂಹ ಸಂಪನ್ಮೂಲ ವ್ಯಕ್ತಿ ಸತೀಶ್, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *