ಬಂಟ್ವಾಳ: ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಂಗಬೆಟ್ಟು ಗ್ರಾಮದ ನೀಲಯ್ಯ ಶೆಟ್ಟಿಗಾರ್(42) ಮತ್ತು ಕೇಸರಿ( 39) ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಅಣ್ಣ- ತಂಗಿ ಆತ್ಮಹತ್ಯೆ ಮಾಡಿ ಕೊಂಡ ಘಟನೆ ನಡೆದಿದೆ.
ಮೃತರು ಇಬ್ಬರೂ ಅನಾರೋಗ್ಯದಿಂದ ಬಳಲುತ್ತಿದ್ದು, ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
