ಹಳೆಯಂಗಡಿ: ಲೋಡ್ ಲಾರಿ ಹಾಗೂ ಸ್ವಿಫ್ಟ್ ಡಿಸೈರ್ ಕಾರ್ ಮಧ್ಯೆ ಅಪಘಾತ ಸಂಭವಿಸಿದ ಕಾರಿನಲ್ಲಿದ್ದ ಪ್ರಯಾಣಿಕರು ಗಂಭೀರ ಗಾಯಗೊಂಡ ಘಟನೆ ಇಲ್ಲಿಗೆ ಸಮೀಪದ ಪಡುಪಣಂಬೂರು ಶನಿಮಂದಿರ ಮುಂಭಾಗ ಬುಧವಾರ ನಸುಕಿನ ಜಾವ ಸಂಭವಿಸಿದೆ.

IMG-20141008-WA0025

IMG-20141008-WA0019

IMG-20141008-WA0020 (1)

IMG-20141008-WA0021

IMG-20141008-WA0024

 

ಘಟನೆಯಲ್ಲಿ ಕಾರಿನಲ್ಲಿದ್ದವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರ್ ಡಿಕ್ಕಿ ಹೊಡೆದ ರಭಸಕ್ಕೆ ಲಾರಿಯ ಪ್ಲೇಟ್ ರಾಡ್ ತುಂಡಾಗಿದೆ. ಶನಿಮಂದಿರ ಮುಂಭಾಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಅವೈಜ್ಞಾನಿಕವಾಗಿ ರಸ್ತೆ ತಿರುವು ನೀಡಲಾಗಿದ್ದು ಇಲ್ಲಿ ವಾಹನಗಳು ಪದೇ ಪದೇ ಅಪಘಾತಕ್ಕೆ ಈಡಾಗುತ್ತಿವೆ.

ಲಾರಿ ಚಾಲಕ ತಾಂತ್ರಿಕ ವೈಫಲ್ಯದಿಂದಾಗಿ ಲಾರಿಯನ್ನು ರಾಂಗ್ ಸೈಡ್ನಲ್ಲಿ ಚಲಾಯಿಸಿದ್ದೇ ಘಟನೆಗೆ ಕಾರಣ ಎಂದು ಶಂಕಿಸಲಾಗಿದೆ. ಕಾರಿನ ಸ್ಟೀರಿಂಗ್ ತುಂಡಾಗಿದ್ದು ಮುಂಭಾಗ ನಜ್ಜುಗುಜ್ಜಾಗಿದೆ. ಮೂಲ್ಕಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

By suddi9

Leave a Reply

Your email address will not be published. Required fields are marked *