ಬಂಟ್ವಾಳ:  ಕೋವಿಡ್(ಕೊರೋನ) ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ದರ ನಿಗದಿ    ಪಡಿಸಿರುವುದನ್ನು ರದ್ದು ಗೊಳಿಸಿ  ಉಚಿತ ಚಿಕಿತ್ಸೆ ನೀಡುವಂತೆ ಒತ್ತಾಯಿಸಿ ಡಿವೈಎಫ್ಐ ಬಂಟ್ವಾಳ ತಾಲೂಕು ಘಟಕ ಮನವಿ ಸಲ್ಲಿಸಿದೆ. ರಾಜ್ಯದಲ್ಲಿರುವ ಸಾರ್ವಜನಿಕ ಆಸ್ಪತ್ರೆಗಳು  ಸರಕಾರದ ನಿರ್ಲಕ್ಷದಿಂದಾಗಿ ಅಗತ್ಯ ವೈದ್ಯರು,ಸಿಬ್ಬಂದಿ , ಔಷದ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದಾಗಿ ಬಳಲುತ್ತಿದ್ದು,ಸಾಮಾನ್ಯ ಜನತೆಯ ಪಾಲಿಗೆ ಕೋವಿಡ್ 19 ರೋಗ ಸಕಂಟಕವಾಗಿ ಪರಿಣಮಿಸಿದೆ.
IMG20200624125948 (1)ಸಾಮಾನ್ಯ ರೋಗಿಗಳು ಈಗ ಆಸ್ಪತ್ರೆಗಳಿಗೆ ಹೋಗಲಾರದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.ರಾಜ್ಯ ಸರಕಾರ ಇಂತಹ ಗಂಬೀರ ಪರಿಸ್ಥಿತಿಯಲ್ಲಿ ಕೊವಿಡ್ 19 ಸೋಂಕಿತ ರೋಗಿಗಳಿಗೆ ಸರಿಯಾದ ಚಿಕಿತ್ಸೆ ನೀಡಲು ಸಾರ್ವಜನಿಕ ಆಸ್ಪತ್ರೆಗಳನ್ನು ಡಾಕ್ಟರ್ ಸಿಬ್ಬಂದಿ ಔಷಧ ಸೇರಿದಂತೆ ಎಲ್ಲಾ ರೀತಿಯಲ್ಲಿಯೂ ಸಜ್ಜುಗೊಳಿಸಬೇಕು. ಅಗತ್ಯ ಬಿದ್ದರೆ ಖಾಸಗಿ ಆಸ್ಪತ್ರೆಗಳನ್ನು ವಶಕ್ಕೆ ಪಡೆದು ಎಲ್ಲರಿಗೂ ಉಚಿತ ಚಿಕಿತ್ಸೆ ನೀಡಬೇಕು, ಈಗಾಗಲೇ  ಲಾಕ್ ಡೌನ್ ನಿಂದಾಗಿ ಉದ್ಯೋಗವಿಲ್ಲದೆ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ  ಸಿಲುಕಿದ್ದು ಈ ಚಿಕಿತ್ಸೆಯ ದರ ನಿಗದಿಯು ಗಾಯದ ಮೇಲೆ ಬರೆ ಎಳೆದಂತಾಗುತ್ತದೆ ಎಂದು ತಳಿಸಲಾಗಿದೆ.ಕೊರೋನಾ ಸೋಂಕಿತರಿಗೆಲ್ಲರಿಗೂ ಸರಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಲು ಬೇಕಾದ ಸಕಲ ವ್ಯವಸ್ಥೆ ಮಾಡಿಕೊಳ್ಳುವುದು ಹಾಗೂ ಅಗತ್ಯಬಿದ್ದರೆ ಖಾಸಗಿ ಆಸ್ಪತ್ರೆಗಳನ್ನು ವಶಕ್ಕೆ ಪಡೆದು ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲು ರಾಜ್ಯ ಸರಕಾರ ಮುಂದಾಗಬೇಕೆಂದು ಒತ್ತಾಯಿಸಿದೆ.   ಈ ಸಂಧರ್ಭ ಡಿ.ವೈ.ಎಫ್.ಐ ಬಂಟ್ವಾಳ ತಾಲೂಕು ಅಧ್ಯಕ್ಷರಾದ ಸುರೇಂದ್ರ ಕೋಟ್ಯಾನ್, ಕಾರ್ಯದರ್ಶಿ ನ್ಯಾಯವಾದಿ ತುಳಸೀದಾಸ್ ವಿಟ್ಲ, ನ್ಯಾಯವಾದಿ ಮಹಮ್ಮದ್ ಗಝಾಲಿ ಮುಂತದವರು ನಿಯೋಗದಲ್ಲಿದ್ದರು.

 

By Suddi9

Leave a Reply

Your email address will not be published. Required fields are marked *